Sunday, June 28, 2026
Homeತಾಜಾ ಸುದ್ದಿಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಪ್ರಕರಣ: ಹೈಕೋರ್ಟ್‌ನಲ್ಲಿ ಪಿಐಎಲ್ ಸಲ್ಲಿಕೆ

ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಪ್ರಕರಣ: ಹೈಕೋರ್ಟ್‌ನಲ್ಲಿ ಪಿಐಎಲ್ ಸಲ್ಲಿಕೆ

- Advertisement -
- Advertisement -

ಬೆಂಗಳೂರು: ಸಿಇಟಿ ಪರೀಕ್ಷೆ ಬರೆಯುವ ಮುನ್ನ ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ಕತ್ತರಿಸಿ ತೆಗೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕ್ಷೇಪಿಸಿ ಸಲ್ಲಿಸಲಾದ ಅರ್ಜಿಗೆ ರಾಜ್ಯ ಸರ್ಕಾರ ಮತ್ತು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಹೈಕೋರ್ಟ್ ನೋಟಿಸ್‌ ಜಾರಿ ಮಾಡಿದೆ.

ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ರಘುನಾಥ್ ಸಲ್ಲಿಸಿದ್ದು, ಈ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್‌.ವಿ. ಅಂಜಾರಿಯಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಇಂದು ವಿಚಾರಣೆ ನಡೆಸಿದ್ದು, ಈ ವೇಳೆ ಅರ್ಜಿದಾರರ ಪರ ಹಿರಿಯ ವಕೀಲ ಎಸ್.ಶ್ರೀರಂಗ ಅವರ ವಾದ ಆಲಿಸಿದ ನ್ಯಾಯಪೀಠ, ಪ್ರತಿವಾದಿಗಳಾದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಕಾರ್ಯ ನಿರ್ವಾಹಕ ಅಧಿಕಾರಿಗೆ ನೋಟಿಸ್ ಜಾರಿಗೊಳಿಸಿ ಪ್ರತಿವಾದಿಗಳು ಆಕ್ಷೇಪಣೆ ಸಲ್ಲಿಸುವಂತೆ ನಿರ್ದೇಶಿಸಿದ ವಿಚಾರಣೆಯನ್ನು ಜೂನ್.9ಕ್ಕೆ ಮುಂದೂಡಿದೆ ಎನ್ನಲಾಗಿದೆ.

- Advertisement -

Latest News

error: Content is protected !!