Wednesday, June 3, 2026
Homeಕರಾವಳಿಬೆಳ್ತಂಗಡಿ ತಾಲೂಕಿನಲ್ಲಿ ಅರಣ್ಯ ಇಲಾಖೆಯ ಜಾಗ ಅತಿಕ್ರಮಣ ಪ್ರಕರಣ; 784 ಎಕರೆ ಜಾಗ ವಶಕ್ಕೆ ಪಡೆಯಲು...

ಬೆಳ್ತಂಗಡಿ ತಾಲೂಕಿನಲ್ಲಿ ಅರಣ್ಯ ಇಲಾಖೆಯ ಜಾಗ ಅತಿಕ್ರಮಣ ಪ್ರಕರಣ; 784 ಎಕರೆ ಜಾಗ ವಶಕ್ಕೆ ಪಡೆಯಲು ಬೆಳ್ತಂಗಡಿ ಅರಣ್ಯ ಇಲಾಖೆ ಸಜ್ಜು

- Advertisement -
- Advertisement -

ಬೆಳ್ತಂಗಡಿ : ಅರಣ್ಯ ಇಲಾಖೆಯ ಭೂಮಿಯನ್ನು ಅತಿಕ್ರಮಣ ಮಾಡಿಕೊಂಡ ಪ್ರಕರಣ ಸಂಬಂಧ ಬೆಳ್ತಂಗಡಿ ಅರಣ್ಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆಯಲು ಸಜ್ಜಾಗಿದ್ದಾರೆ ಎಂದು ಮಹಾಎಕ್ಸ್ ಪ್ರೆಸ್ ವೆಬ್ ಸೈಟ್ ಗೆ ಮಾಹಿತಿ ಲಭ್ಯವಾಗಿದೆ.

ಬೆಳ್ತಂಗಡಿ ವಲಯ ಅರಣ್ಯ ಇಲಾಖೆಗೆ ಸೇರಿದ ಅರಣ್ಯ ಭೂಮಿಯನ್ನು ಅತಿಕ್ರಮಣ ಮಾಡಿಕೊಂಡ 447 ಪ್ರಕರಣ ದಾಖಲಾಗಿದ್ದು. ಇದರಲ್ಲಿ 784 ಎಕರೆ ಜಾಗವನ್ನು ಅತಿಕ್ರಮಣ ಮಾಡಿಕೊಂಡಿದ್ದಾರೆ. ಬೆಳ್ತಂಗಡಿ ತಾಲೂಕಿನ ನಾಯತರ್ಪು ಗ್ರಾಮದ ರಾಮಚಂದ್ರ ಭಟ್ ಎಂಬವರು ಅರಣ್ಯ ಇಲಾಖೆಯ 23 ಎಕರೆ ಜಾಗವನ್ನು ಅತಿಕ್ರಮಣ ಮಾಡಿಕೊಂಡಿದ್ದಾರೆ ಅದನ್ನು ಕೂಡ ತೆರವು ಮಾಡಿಸಲಿದ್ದಾರೆ‌. 784 ಎಕರೆ ಅತಿಕ್ರಮಣ ಮಾಡಿಕೊಂಡದ್ದನ್ನು ತೆರವು ಮಾಡಿ ಅರಣ್ಯ ಇಲಾಖೆ ವಶಕ್ಕೆ ಪಡೆಯಲು ಇಲಾಖೆ ಅಧಿಕಾರಿಗಳು ಎಲ್ಲಾ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ ಎಂದು ಅರಣ್ಯ ಇಲಾಖೆಯ ಮೂಲಗಳು ಮಹಾ ಎಕ್ಸ್ಪ್ರೆಸ್ ವೆಬ್ ಸೈಟ್ ಗೆ ಮಾಹಿತಿ ನೀಡಿದೆ‌.

- Advertisement -

Latest News

error: Content is protected !!