Sunday, May 5, 2024
Homeಅಪರಾಧಕಡಬ: ಅತ್ಯಾಚಾರ ಸಂತ್ರಸ್ತೆ ಮೇಲೆಯೇ ಪೊಲೀಸ್ ಕಾನ್ ಸ್ಟೇಬಲ್ ರೇಪ್ ಪ್ರಕರಣ; ಆರೋಪಿ...

ಕಡಬ: ಅತ್ಯಾಚಾರ ಸಂತ್ರಸ್ತೆ ಮೇಲೆಯೇ ಪೊಲೀಸ್ ಕಾನ್ ಸ್ಟೇಬಲ್ ರೇಪ್ ಪ್ರಕರಣ; ಆರೋಪಿ ಶಿವರಾಜ್ ಬಂಧನ

spot_img
- Advertisement -
- Advertisement -

ಕಡಬ:ಅತ್ಯಾಚಾರ ಪ್ರಕರಣದ ಸಂತ್ರಸ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದಲ್ಲಿ ಪೊಲೀಸ್ ಕಾನ್‌ಸ್ಟೆಬಲ್ ವಿರುದ್ಧ ಕಡಬ ಪೊಲೀಸ್ ಠಾಣೆಯಲ್ಲಿ ಸೋಮವಾರ ಪ್ರಕರಣ ದಾಖಲಾಗಿದೆ.

ಎರಡು ವರ್ಷಗಳ ಹಿಂದೆ ನನ್ನ ಮಗಳು ಅತ್ಯಾಚಾರಕ್ಕೆ ಒಳಗಾಗಿದ್ದಳು. ಆ ಪ್ರಕರಣ ಆರು ತಿಂಗಳ ಹಿಂದೆ ಮುಗಿದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕಡಬ ಠಾಣೆಯ ಪೊಲೀಸ್ ಸಿಬ್ಬಂದಿ ದಾಖಲೆ ಸಮನ್ಸ್ ನೀಡುವ ವಿಚಾರಕ್ಕೆ ಮನೆಗೆ ಬರುತ್ತಿದ್ದ. ಆಗ ಪರಿಚಯಸ್ಥನಾಗಿದ್ದು, ಪ್ರಕರಣ ಮುಗಿದಿದ್ದರೂ ಬೇರೆ ಬೇರೆ ನೆಪವೊಡ್ಡಿ ಮನೆಗೆ ಬರುತ್ತಿರುವುದು ನನ್ನ ಗಮನಕ್ಕೆ ಬಂದಿತ್ತು ಎಂದು ಸಂತ್ರಸ್ತೆಯ ತಂದೆ ಕಡಬ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.ಈ ಹಿನ್ನಲೆಯಲ್ಲಿ ಸಂತ್ರಸ್ತೆಯ ತಂದೆ ನೀಡಿರುವ ದೂರಿನ ಮೇಲೆ ಕಡಬ ಠಾಣೆ ಪೊಲೀಸರು ಆರೋಪಿ ಶಿವರಾಜ್‌ನನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ.

ಮಗಳನ್ನು ವಿಚಾರಿಸಿದಾಗ, ಕಡಬ ಪೊಲೀಸ್ ಸಿಬ್ಬಂದಿ ನನ್ನನ್ನು ಮದುವೆ ಆಗುವುದಾಗಿ ಹೇಳಿ ದೈಹಿಕ ಸಂಪರ್ಕ ಬೆಳೆಸಿದ್ದಾನೆ. ಇದೀಗ ಐದೂವರೆ ತಿಂಗಳ ಗರ್ಭಿಣಿ ಆಗಿರುವುದಾಗಿ ತಿಳಿಸಿದ್ದಾಳೆ ಈ ಮಧ್ಯೆ ತನ್ನ ಮಗಳನ್ನು ಹಾಗೂ ಪತ್ನಿಯನ್ನು ಅಪಹರಿಸಿ ಅಜ್ಞಾತ ಸ್ಥಳದಲ್ಲಿ ಇಟ್ಟಿರುವುದಾಗಿ ಸಂತ್ರಸ್ತೆಯ ತಂದೆ ಆರೋಪಿಸಿ ದೂರು ನೀಡಿದ್ದಾರೆ. ಆರೋಪಿಯನ್ನು ಬಂಧಿಸಿ ಆತನನ್ನು ವಿಚಾರಣೆ ನಡೆಸಿ ನನ್ನ ಮಗಳಿಗೆ ನ್ಯಾಯ ಕೊಡಿಸಬೇಕು ಎಂದು ಒತ್ತಾಯಿಸಿದ್ದಾರೆ.

ಎಸ್ಪಿ ಡಾ.ಋಷಿಕೇಶ್ ಭಗವಾನ್ ಸೋನಾವಣೆ ಹಾಗೂ ಪುತ್ತೂರು ಡಿವೈಎಸ್ಪಿ ಡಾ.ಗಾನಾ ಪಿ.ಕುಮಾರ್ ಅವರು ಕಡಬ ಪೊಲೀಸ್ ಠಾಣೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.ಇದು ಗಂಭೀರ ಪ್ರಕರಣವಾಗಿದ್ದು ಈಗಲೇ ಏನನ್ನೂ ಹೇಳಲು ಸಾಧ್ಯವಿಲ್ಲ ಸಮಗ್ರ ತನಿಖೆ ಬಳಿಕ ವಿವರ ನೀಡಲಾಗುವುದು’ ಎಂದು ಎಸ್.ಪಿ ಪ್ರತಿಕ್ರಿಯಿಸಿದ್ದಾರೆ

ಇದೀಗ ಪೊಲೀಸ್ ಸಿಬ್ಬಂದಿ ಶಿವರಾಜ್ ನನ್ನು ವಶಕ್ಕೆ ಪಡೆದಿರುವ ಕಡಬ ಪೊಲೀಸರು ಆತನ ವಿರುದ್ಧ ಐಪಿಸಿ 506, ಪೋಕ್ಸ್ ಆ್ಯಕ್ಟ್ 2012 ಸೇರಿ ವಿವಿಧ ಸೆಕ್ಷನ್‌ಗಳ ಅಡಿ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ

- Advertisement -
spot_img

Latest News

error: Content is protected !!