Saturday, June 6, 2026
Homeಅಪರಾಧಮಂಗಳೂರು : ಕಚೇರಿಯಲ್ಲಿ ಯುವತಿಗೆ ಲೈಂಗಿಕ ಕಿರುಕುಳ ; ಆರೋಪಿಗೆ ಜಾಮೀನು!

ಮಂಗಳೂರು : ಕಚೇರಿಯಲ್ಲಿ ಯುವತಿಗೆ ಲೈಂಗಿಕ ಕಿರುಕುಳ ; ಆರೋಪಿಗೆ ಜಾಮೀನು!

- Advertisement -
- Advertisement -

ಮಂಗಳೂರು : ದ.ಕ. ಜಿಲ್ಲಾ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ಮುಹಮ್ಮದ್ ಫಾರೂಕ್ ಎಂಬಾತ ಕಚೇರಿಯಲ್ಲಿ ಸಹೋದ್ಯೋಗಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಬಂಧಿಸಲಾಗಿದ್ದು ಇಂದು ನಗರದ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ.

ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ‌ ಕಚೇರಿಯಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಯುವತಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದಲ್ಲಿ ಪಾಂಡೇಶ್ವರ ಮಹಿಳಾ ಪೊಲೀಸ್ ಠಾಣೆಯಲ್ಲಿ ಫಾರೂಕ್ ನನ್ನು‌ ವಶಕ್ಕೆ ಪಡೆಯಲಾಗಿತ್ತು.ಗುರುವಾರ ಫಾರೂಕ್ ನನ್ನು‌ ನಗರದ ಜೆಎಂಎಫ್ ಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಜಾಮೀನು ನೀಡಿದೆ.

- Advertisement -

Latest News

error: Content is protected !!