Monday, June 8, 2026
Homeಕರಾವಳಿಪುತ್ತೂರು; ವಿದ್ಯಾರ್ಥಿಗೆ ಬ್ಲೇಡ್ ನಿಂದ ಇರಿದ ಪ್ರಕರಣ: ದಕ್ಷಿಣಕನ್ನಡ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಯತೀಶ್ ಹೇಳಿದ್ದೇನು?

ಪುತ್ತೂರು; ವಿದ್ಯಾರ್ಥಿಗೆ ಬ್ಲೇಡ್ ನಿಂದ ಇರಿದ ಪ್ರಕರಣ: ದಕ್ಷಿಣಕನ್ನಡ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಯತೀಶ್ ಹೇಳಿದ್ದೇನು?

- Advertisement -
- Advertisement -

ಪುತ್ತೂರು; ವಿದ್ಯಾರ್ಥಿಗೆ ಬ್ಲೇಡ್ ನಿಂದ ಇರಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ದಕ್ಷಿಣಕನ್ನಡ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಯತೀಶ್ ಪ್ರತಿಕ್ರಿಯಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿ ನೀಡಿದ ದಕ್ಷಿಣಕನ್ನಡ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್ ಮಂಗಳವಾರ ಬೆಳಿಗ್ಗೆ ಸುಮಾರು 8.30 ಕ್ಕೆ ಈ ಘಟನೆ ನಡೆದಿದೆ. ಪುತ್ತೂರಿನ ಕೊಂಬೆಟ್ಟು ಜೂನಿಯರ್ ಕಾಲೇಜಿನ ಬಾಲಕಿ ಕಾಲೇಜಿಗೆ ತೆರಳುವ ಮಧ್ಯೆ ಅದೇ ಕಾಲೇಜಿನ ಬಾಲಕ ಬ್ಲೇಡ್ ನಿಂದ ಕೈಗೆ ಗೀರಿ ಹಲ್ಲೆ ನಡೆಸಿದ್ದಾನೆ ಎಂದು ಬಾಲಕಿ ದೂರಿನಲ್ಲಿ ತಿಳಿಸಿದ್ದಾಳೆ. ಪ್ರಕರಣ ದಾಖಲಿಸಿ ಪೋಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.

ಸೂಕ್ತ ತನಿಖೆ ನಡೆಸಿ ವರದಿಯನ್ನು ನ್ಯಾಯಾಲಯಕ್ಕೆ ನೀಡಲಾಗುವುದು, ವೈಜ್ಞಾನಿಕವಾಗಿ, ಕಾನೂನು ಪ್ರಕಾರವೇ ತನಿಖೆ ನಡೆಯಲಿದೆ ಎಂದು ಹೇಳಿದ ಅವರು ಪ್ರಕರಣ ತನಿಖೆ ಹಂತದಲ್ಲಿರುವ ಸಂದರ್ಭದಲ್ಲಿ ಹೆಚ್ಚಿನ ಮಾಹಿತಿ ಇನ್ನಷ್ಟೇ ಕಲೆ ಹಾಕಬೇಕಿದೆ. ತನಿಖೆ ಮುಗಿದ ಬಳಿಕವಷ್ಟೇ ಎಲ್ಲಾ ಮಾಹಿತಿಯನ್ನು ನೀಡಲಾಗುವುದು. ಸದ್ಯ ಬಾಲಕನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ ಎಂದು ದಕ್ಷಿಣಕನ್ನಡ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್ ಹೇಳಿದ್ದಾರೆ.

- Advertisement -

Latest News

error: Content is protected !!