Thursday, June 4, 2026
Homeತಾಜಾ ಸುದ್ದಿಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆದ ಪ್ರಕರಣ: ಮೂವರು ಆರೋಪಿಗಳನ್ನು ಬಂಧಿಸಿದ ಪೊಲೀಸರು

ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆದ ಪ್ರಕರಣ: ಮೂವರು ಆರೋಪಿಗಳನ್ನು ಬಂಧಿಸಿದ ಪೊಲೀಸರು

- Advertisement -
- Advertisement -

ಬೆಂಗಳೂರು:  ರಾಜರಾಜೇಶ್ವರಿ ನಗರ ಬಿಜೆಪಿ ಶಾಸಕ ಮುನಿರತ್ನ ಅವರ ಮೇಲೆ ಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.

ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಸೈದುಲು ಅಡಾವತ್ ಅವರು ಬಿಜೆಪಿ ಶಾಸಕ ಮುನಿರತ್ನ ಅವರ ಮೇಲೆ ಇಂದು ಬೆಳಿಗ್ಗೆ 11.30ರ ಸುಮಾರಿಗೆ ಮೊಟ್ಟೆ ಎಸೆಯಲಾಗಿದ ಎಂದಿದ್ದಾರೆ,

ಶಾಸಕರು ಕಾರ್ಯಕ್ರಮ ಮುಗಿಸಿ ವಾಪಾಸಾಗುತ್ತಿದ್ದಾಗ ಈ ಘಟನೆ ನಡೆದಿದೆ. ಶಾಸಕರ ಕಡೆಯಿಂದ ಇನ್ನೂ ನಮಗೆ ಯಾವುದೇ ದೂರು ಬಂದಿಲ್ಲ. ದೂರು ನೀಡಿದ ನಂತ್ರ ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದಿದ್ದಾರೆ. ಈ ಘಟನೆ ನಡೆಯುವುದಕ್ಕೂ ಮುನ್ನ ಮೊದಲೇ ಮಲ್ಲೇಶ್ವರಂ ಉಪ ವಿಭಾಗದ ಎಸಿಪಿ ಸ್ಥಳದಲ್ಲಿ ಇದ್ದರು. ಕಾರಿನಲ್ಲಿ ಹೋಗುವಂತೆ ಶಾಸಕರಿಗೆ ಪೊಲೀಸರು ಸೂಚಿಸಿದ್ದರು. ಆದರೂ ಮುಖ್ಯ ರಸ್ತೆ ಹತ್ತಿರವಿದ್ದ ಕಾರಣ ನಡೆದುಕೊಂಡೇ ಹೋಗಿದ್ದಾರೆ. ಈ ವೇಳೆ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆಯಲಾಗಿದೆ. ಈ ಘಟನೆ ಸಂಬಂಧ ಮುನ್ನೆಚ್ಚರಿಕೆ ಕ್ರಮವಾಗಿ ಮೂವರನ್ನು ವಶಕ್ಕೆ ಪಡೆದಿರುವುದಾಗಿ ತಿಳಿಸಿದ್ದಾರೆ.

- Advertisement -

Latest News

error: Content is protected !!