Thursday, June 25, 2026
HomeUncategorizedಬಂಟ್ವಾಳ; ಮನೆಯ ಹಟ್ಟಿಯಿಂದಲೇ ದನ ಕಳ್ಳತನ ಪ್ರಕರಣದ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿ, ಕೋಮು ಸೌಹಾರ್ದತೆ...

ಬಂಟ್ವಾಳ; ಮನೆಯ ಹಟ್ಟಿಯಿಂದಲೇ ದನ ಕಳ್ಳತನ ಪ್ರಕರಣದ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿ, ಕೋಮು ಸೌಹಾರ್ದತೆ ಕದಡಲು ಯತ್ನ:  ಆರೋಪಿ ವಿರುದ್ಧ ಪ್ರಕರಣ ದಾಖಲು

- Advertisement -
- Advertisement -

ಬಂಟ್ವಾಳ; ಮನೆಯ ಹಟ್ಟಿಯಿಂದಲೇ ದನ ಕಳ್ಳತನ ಪ್ರಕರಣದ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿ, ಕೋಮು ಸೌಹಾರ್ದತೆ ಕದಡಲು ಯತ್ನಿಸಿದ  ಆರೋಪಿ ವಿರುದ್ಧ ಪ್ರಕರಣ ದಾಖಲಾಗಿದೆ. ನರಸಿಂಹ ಶೆಟ್ಟಿ ಮಾಣಿ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದೆ.

ದಿನಾಂಕ: 04.09.2025 ರಂದು ರಾತ್ರಿ ಸಮಯ, ಬಂಟ್ವಾಳ ಪೆರ್ನೆ ಗ್ರಾಮದ ಕಡಂಬು ಎಂಬಲ್ಲಿನ ಮನೆ ಬಳಿಯಿರುವ ಹಟ್ಟಿಯಿಂದ  ಕಿಡಿಗೇಡಿಗಳು ದನವೊಂದನ್ನು ಕಳವು ಮಾಡಿ ಹತ್ಯೆ ಮಾಡಿರುವ ಘಟನೆಯ ಬಗ್ಗೆ ನರಸಿಂಹ ಶೆಟ್ಟಿ ಮಾಣಿ ಮಾತನಾಡುವ ವೇಳೆ, ಘಟನೆಯ ಬಗ್ಗೆ ಸುಳ್ಳು ಸುದ್ದಿಯನ್ನು ನೀಡಿರುವುದಲ್ಲದೇ, ಧರ್ಮ‌ಧರ್ಮಗಳ ನಡುವೆ ಕೋಮುಧ್ವೇಶ ಹಾಗೂ ವೈರತ್ವ ಉಂಟಾಗುವಂತೆ ಪ್ರಚೋದನಕಾರಿಯಾಗಿ ಮಾತನಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರವಾಗಿರುವುದು ಕಂಡುಬಂದಿದ್ದು, ಇದರಿಂದಾಗಿ ಸಮಾಜದಲ್ಲಿ ಕೋಮು ಸೌಹಾರ್ದತೆಗೆ ದಕ್ಕೆಯಾಗುವ ಹಾಗೂ ಸಾರ್ವಜನಿಕ ವಲಯದಲ್ಲಿ ಭಯಭೀತಿ ಉಂಟಾಗುವ ಸಾಧ್ಯತೆಗಳಿರುವುದರಿಂದ ನರಸಿಂಹ ಶೆಟ್ಟಿ ಮಾಣಿ ಎಂಬಾತನ ವಿರುದ್ಧ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!