- Advertisement -
![]()
- Advertisement -
ಸುಬ್ರಹ್ಮಣ್ಯ :ಅಡ್ಡಾದಿಡ್ಡಿ ಬೈಕ್ ಚಲಾಯಿಸಿ ಕೆಎಸ್ ಆರ್ ಟಿಸಿ ಬಸ್ ಸಂಚಾರಕ್ಕೆ ಅಡ್ಡಿಪಡಿಸಿದ ಬೈಕ್ ಸವಾರರ ವಿರುದ್ಧ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶುಕ್ರವಾರ ಬಳ್ಪದಿಂದ ಸುಬ್ರಹ್ಮಣ್ಯಕ್ಕೆ ಬರುವಾಗ ಘಟನೆ ನಡೆದಿದ್ದು, ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿತ್ತು. ಬಸ್ ಸಂಚಾರಕ್ಕೆ ಅಡ್ಡಿಪಡಿಸಿದ ಹಾಗೂ ನಿಯಮ ಪಾಲಿಸದೆ ಬೈಕ್ ಚಲಾಯಿಸಿದ ಬಗ್ಗೆ ಆಕ್ರೋಶ ವ್ಯಕ್ತವಾಗಿತ್ತು.
ಘಟನೆ ಬಗ್ಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಯುವಕರ ವಿರುದ್ಧ ಪ್ರಕರಣ ದಾಖಲಾಗಿದ್ದು, ಯುವಕರನ್ನು ಪತ್ತೆ ಹಚ್ಚಿ ಠಾಣೆಗೆ ಕರೆಸಿ ದಂಡ ವಿಧಿಸಲಾಗಿದೆ ಎಂದು ತಿಳಿದುಬಂದಿದೆ. ಇನ್ನು ಯುವಕರು ಗುತ್ತಿಗಾರು ಹಾಗೂ ಏನೆಕಲ್ ಮೂಲದವರು ಎನ್ನಲಾಗಿದೆ.
- Advertisement -


