Saturday, June 6, 2026
Homeಕರಾವಳಿಮಂಗಳೂರುಮಂಗಳೂರು ; ವಾಟ್ಸಾಪ್‌ ಗ್ರೂಪ್‌ನಲ್ಲಿ ಪ್ರಚೋದನಕಾರಿ ಸಂದೇಶ ಫಾವರ್ಡ್ ಮಾಡಿದಾತನ ವಿರುದ್ಧ ಪ್ರಕರಣ ದಾಖಲು

ಮಂಗಳೂರು ; ವಾಟ್ಸಾಪ್‌ ಗ್ರೂಪ್‌ನಲ್ಲಿ ಪ್ರಚೋದನಕಾರಿ ಸಂದೇಶ ಫಾವರ್ಡ್ ಮಾಡಿದಾತನ ವಿರುದ್ಧ ಪ್ರಕರಣ ದಾಖಲು

- Advertisement -
- Advertisement -

ಮಂಗಳೂರು ; ವಾಟ್ಸಾಪ್‌ ಗ್ರೂಪ್‌ನಲ್ಲಿ ಪ್ರಚೋದನಕಾರಿ ಸಂದೇಶ ಫಾವರ್ಡ್ ಮಾಡಿದ ಯುವಕನ ವಿರುದ್ಧ ಪ್ರಕರಣ ದಾಖಲಾಗಿದೆ.ಸುಹಾಸ್‌ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ “ಮಂಗಳೂರು ಮುಸ್ಲಿಮ್‌ ಯುವಸೇನೆʼ ಎಂಬ ವಾಟ್ಸಾಪ್‌ ಗ್ರೂಪ್‌ನಲ್ಲಿ ವಿಟ್ಲದ ಮೊಹಮ್ಮದ್‌ ಆನಾಸ್‌ ಎಂಬಾತ ಪ್ರಚೋದನಾಕಾರಿ ಮೆಸೇಜ್ ಫಾರ್ವಡ್ ಮಾಡಿದ್ದ. ಈತನ ವಿರುದ್ಧ ಪ್ರಕರಣ ದಾಖಲಾಗಿದೆ. ಇದೀಗ ಆತನನ್ನು ಪತ್ತೆ ಮಾಡಲಾಗಿದ್ದು, ಆತನ ವಿಚಾರಣೆ ನಡೆಸುತ್ತಿದ್ದಾರೆ.

ಈ ಸಂಬಂಧ ಮೂಡಬಿದಿರೆ ಪೊಲೀಸ್‌ ಠಾಣೆಯಲ್ಲಿ ಸೆಕ್ಷನ್‌ 353(2)ರ ಅಡಿ ಪ್ರಕರಣ ದಾಖಲು ಮಾಡಲಾಗಿದೆ. ಮಂಗಳೂರು ಸಿ.ಇ.ಎನ್‌ ಅಪರಾಧ ಪೊಲೀಸ್‌ ಠಾಣೆಗೆ ಈ ಪ್ರಕರಣದ ಹೆಚ್ಚಿನ ತನಿಖೆಗೆ ಹಸ್ತಾಂತರಿಸಲಾಗಿರುತ್ತದೆ. ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

- Advertisement -

Latest News

error: Content is protected !!