Tuesday, July 21, 2026
Homeಕರಾವಳಿಮಂಗಳೂರು: ಲಾಡ್ಜ್ ನಲ್ಲಿ ಹೈಟೆಕ್ ವೇಶ್ಯಾವಾಟಿಕೆ, ಇಬ್ಬರ ಬಂಧನ, ಮೂವರು ಯುವತಿಯರ ರಕ್ಷಣೆ

ಮಂಗಳೂರು: ಲಾಡ್ಜ್ ನಲ್ಲಿ ಹೈಟೆಕ್ ವೇಶ್ಯಾವಾಟಿಕೆ, ಇಬ್ಬರ ಬಂಧನ, ಮೂವರು ಯುವತಿಯರ ರಕ್ಷಣೆ

- Advertisement -
- Advertisement -

ಮಂಗಳೂರು: ನಗರದ ಪಂಪ್ ವೆಲ್ ಬಳಿಯಿರುವ ಲಾಡ್ಜ್ ಒಂದರಲ್ಲಿ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ದಾಳಿಯ ವೇಳೆ ಮೂವರು ಯುವತಿಯರನ್ನು ರಕ್ಷಿಸಲಾಗಿದೆ.

ಪುತ್ತೂರು ಬೋಳುವಾರು ನಿವಾಸಿ ಸಾಗರ್ ಮತ್ತು ಮಂಗಳೂರಿನ ಹರೀಶ್ ಶೆಟ್ಟಿ ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ.

ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿರುವ ಬಗ್ಗೆ ಮಾಹಿತಿ ಪಡೆದ ಸಿಸಿಬಿ ಪೊಲೀಸರು, ಕದ್ರಿ ಠಾಣೆ ಪೊಲೀಸರು ಹಾಗೂ ಮಹಿಳಾ ಪೊಲೀಸ್ ಠಾಣೆ ಸಿಬ್ಬಂದಿ ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ.

ಸಾಗರ್ ದಲ್ಲಾಳಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಹರೀಶ್ ಶೆಟ್ಟಿ ಲಾಡ್ಜ್ ಸಿಬ್ಬಂದಿಯಾಗಿದ್ದ. ಯುವತಿಯರನ್ನು ಕರೆತಂದು ವೇಶ್ಯಾವಾಟಿಕೆ ನಡೆಸುತ್ತಿದ್ದರು ಎಂದು ಹೇಳಲಾಗಿದೆ.

- Advertisement -

Latest News

error: Content is protected !!