Monday, April 29, 2024
Homeತಾಜಾ ಸುದ್ದಿಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯವರಿಗೆ ಜಾತಿ ಪ್ರಮಾಣ ಪತ್ರ ನೀಡಲು ಆದೇಶ

ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯವರಿಗೆ ಜಾತಿ ಪ್ರಮಾಣ ಪತ್ರ ನೀಡಲು ಆದೇಶ

spot_img
- Advertisement -
- Advertisement -

ಬೆಂಗಳೂರು: ರಾಜ್ಯದಲ್ಲಿರುವ ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣರಿಗೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರವನ್ನು ವಿತರಿಸಲು ರಾಜ್ಯ ಸರಕಾರ ನಿರ್ಧರಿಸಿದೆ. ಈ ಬಗ್ಗೆ ಕಂದಾಯ ಇಲಾಖೆ ಸುತ್ತೋಲೆ ಹೊರಡಿಸಿದೆ. ಈ ಬಗ್ಗೆ ಇಲಾಖೆಯ ಸಚಿವ ಆರ್.ಅಶೋಕ್, “ರಾಜ್ಯದ ಒಟ್ಟಾರೆ ಜನಸಂಖ್ಯೆಯಲ್ಲಿ ಶೇ. ಮೂರರಷ್ಟು ಬ್ರಾಹ್ಮಣರಿದ್ದಾರೆ. ಬ್ರಾಹ್ಮಣ ಸಮುದಾಯಕ್ಕೆ ಜಾತಿ ಪ್ರಮಾಣಪತ್ರವನ್ನು ನೀಡಲು ರಾಜ್ಯ ಸರಕಾರ ನಿರ್ಧರಿಸಿದೆ”ಎಂದು ಸಚಿವರು ಹೇಳಿದರು.

ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮಾಜದವರಿಗೆ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಸ್ವಯಂ ಉದ್ಯೋಗ ಹಾಗೂ ಇನ್ನಿತರ ಸೌಲಭ್ಯಗಳನ್ನೊಳಗೊಂಡಂತೆ ಯೋಜನೆಗಳನ್ನು ಜಾರಿಗೆ ತರುವ ಉದ್ದೇಶಕ್ಕಾಗಿ ಕರ್ನಾಟಕ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಸ್ಥಾಪಿಸಲಾಗಿದೆ. ಈ ಮಧ್ಯೆ ಕೇಂದ್ರ ಸರಕಾರ ಸಂವಿಧಾನಕ್ಕೆ ತಿದ್ದುಪಡಿ ತಂದು ನಾಗರಿಕ ಹುದ್ದೆಗಳಲ್ಲಿ ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಗರಿಷ್ಟ ಶೇ.10ರಷ್ಟು ಮೀಸಲಾತಿ ಕಲ್ಪಿಸಿ ಆದೇಶ ಹೊರಡಿಸಿದೆ.

ಬ್ರಾಹ್ಮಣ ಅಭಿವೃದ್ಧಿ ಮಂಡಳಿಯಿಂದ ವಿವಿಧ ಯೋಜನೆಗಳಿಗೆ ಫಲಾನುಭವಿಗಳನ್ನು ಆಯ್ಕೆ ಮಾಡುವ ಸಂದರ್ಭದಲ್ಲಿ ಈ ಪ್ರಮಾಣ ಪತ್ರಗಳನ್ನು ಪರಿಗಣಿಸಲು ಅನುಮತಿ ನೀಡಲಾಗಿದೆ. ಈಗ ಅರ್ಹ ಫಲಾನುಭವಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಡಿಸಿಎಂ ಗೋವಿಂದ ಕಾರಜೋಳ ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!