ಮಂಗಳೂರು:ಕ್ಯಾಥೋಲಿಕ್ ಸಭಾ ಅಧ್ಯಕ್ಷ ಅಲ್ವಿನ್ ಜೆರೋಮ್ ಡಿಸೋಜ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬಂಟ್ವಾಳ ತಾಲೂಕಿನ ನಿವಾಸಿ ಮೊಹಮ್ಮದ್ ಅತಾವುಲ್ಲಾ (40) ಹಾಗೂ ಮಾರ್ನಮಿಕಟ್ಟೆಯ ನಿವಾಸಿ ತೌಸೀರ್ ಅಲಿಯಾಸ್ ಪತ್ತೊಂಜಿ ತೌಸಿರ್ (31) ಬಂಧಿತ ಆರೋಪಿಗಳು.
ನೇತ್ರಾವತಿ ನದಿಯಲ್ಲಿ ಪಾವೂರು ಉಳಿಯ ದ್ವೀಪದ ಬಳಿ ಅಕ್ರಮ ಮರಳುಗಾರಿಕೆ ನಡೆಯುತ್ತಿದೆ ಎಂದು ಆರೋಪಿಸಿ ಕಥೋಲಿಕ್ ಸಭಾ ನೇತೃತ್ವದಲ್ಲಿ ಸೆಪ್ಟೆಂಬರ್ 29ರಂದು ಪ್ರತಿಭಟನೆ ನಡೆದಿತ್ತು. ಈ ಬಗ್ಗೆ ಹೆಚ್ಚಿನ ಮಾಹಿತಿ ನೀಡಲು ಅಲ್ವಿನ್ ಅವರು ಸ್ಥಳಕ್ಕೆ ಮಾಧ್ಯಮದವರನ್ನು ಅಕ್ಟೋಬರ್ 5ರಂದು ಕರೆದೊಯ್ದಿದ್ದರು. ಈ ವೇಳೆ ಅಡ್ಯಾರ್ ಸೇತುವೆ ಬಳಿ ಆರೋಪಿ ಅತಾವುಲ್ಲಾ ಅಲ್ವಿನ್ ಅವರಿಗೆ ಅವಾಚ್ಯವಾಗಿ ಬೈದು ಹಲ್ಲೆಗೆ ಪ್ರಚೋದನೆ ನೀಡಿದ್ದ. ಆರೋಪಿ ತೌಸಿರ್ ಅವಾಚ್ಯವಾಗಿ ಬೈದು ಹಲ್ಲೆ ಮಾಡಿದ್ದ. ಆರೋಪಿಗಳ ವಿರುದ್ಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.


