Thursday, June 4, 2026
Homeಕರಾವಳಿಕಡಬ: ಸಿಡಿಲು ಬಡಿದು ಹಟ್ಟಿಯಲ್ಲಿದ್ದ ದನ‌ ಸಾವು

ಕಡಬ: ಸಿಡಿಲು ಬಡಿದು ಹಟ್ಟಿಯಲ್ಲಿದ್ದ ದನ‌ ಸಾವು

- Advertisement -
- Advertisement -

ಕಡಬ : ಸಿಡಿಲು ಬಡಿದು ಹಟ್ಟಿಯಲ್ಲಿದ್ದ  ದನವೊಂದು ಸಾವನ್ನಪ್ಪಿದ ಘಟನೆ ಇಂದು ಸಂಜೆ ಮರ್ದಾಳದಲ್ಲಿ ನಡೆದಿದೆ.

ಐತ್ತೂರು ಗ್ರಾಮದ ಕೊಡೆಂಕೀರಿ ನಿವಾಸಿ ಕೊರಗಪ್ಪ ಗೌಡ ಎಂಬವರ ದನದ ಕೊಟ್ಟಿಗೆಗೆ ಸಿಡಿಲು ಬಡಿದ ಪರಿಣಾಮ ಹಸುವೊಂದು ಅಸುನೀಗಿದೆ. ಹೀಗಾಗಿ ಕೊಟ್ಟಿಗೆಯ ಗೋಡೆಗಳು ಬಿರುಕು ಬಿಟ್ಟಿದೆ.

ಇನ್ನು ಮನೆಯ ವಯರಿಂಗ್ ಸಿಡಿಲಿನ ಆರ್ಭಟಕ್ಕೆ ಸಂಪೂರ್ಣ ಸುಟ್ಟು ಕರಕಲಾಗಿದ್ದು, ಇನವರ್ಟರ್ ಗೆ ಹಾನಿಯಾಗಿದೆ. ಈ ಸಮಯದಲ್ಲಿ ಮನೆ ಮಂದಿ ಹೊರಗಡೆ ಇದ್ದ ಕಾರಣ ಅಪಾಯದಿಂದ ಪಾರಾಗಿದ್ದಾರೆ.ಅಪಾರ ನಷ್ಟ ಉಂಟಾಗಿದೆ ಎಂದು ತಿಳಿದು ಬಂದಿದೆ.

ಕಡಬ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರೀ ಗಾಳಿ ಮಳೆಯಾಗಿದ್ದು ಕೃಷಿ ಹಾನಿಯಾಗಿದೆ. ಅಡಿಕೆ ಮರಗಳು, ಬಾಳೆ ಗಿಡಗಳು ನೆಲಕ್ಕುರುಳಿರುವ ಬಗ್ಗೆ ವರದಿಯಾಗಿದೆ.

- Advertisement -

Latest News

error: Content is protected !!