Saturday, June 6, 2026
Homeಅಪರಾಧಬಂಗ್ರಕುಳೂರಿನಲ್ಲಿ ದನ ಕಳ್ಳತನ – ಮೂವರ ಬಂಧನ, ವಾಹನ ವಶ

ಬಂಗ್ರಕುಳೂರಿನಲ್ಲಿ ದನ ಕಳ್ಳತನ – ಮೂವರ ಬಂಧನ, ವಾಹನ ವಶ

- Advertisement -
- Advertisement -

ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಬಂಗ್ರಕುಳೂರಿನ ಗೋಲ್ಡ್‌ಫಿಂಚ್ ಸಿಟಿ ಬಳಿ ಮೂರು ಹಸುಗಳನ್ನು ಮೇಯಲು ಬಿಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ.

ಕಳವು ಮಾಡಿದ ಜಾನುವಾರುಗಳನ್ನು ಸಾಗಿಸಲು ಬಳಸಲಾಗಿದ್ದ ಕೆಎ 19 ಎಂಎ 5706 ನೋಂದಣಿ ಸಂಖ್ಯೆಯ ಕಪ್ಪು ಸ್ಕಾರ್ಪಿಯೋ ವಾಹನವನ್ನೂ ಪೊಲೀಸರು ಜಪ್ತಿ ಮಾಡಿದ್ದಾರೆ. ಬಂಧಿತರನ್ನು ಉಳ್ಳಾಲ ನಿವಾಸಿ ಮೊಹಮ್ಮದ್ ಸಲೀಂ (32), ಉಳ್ಳಾಲದ ಮಾಸ್ತಿಕಟ್ಟೆ ನಿವಾಸಿ ಮೊಹಮ್ಮದ್ ತಂಝಿಲ್ (25) ಮತ್ತು ಉಳ್ಳಾಲದ ಕೋಡಿ ನಿವಾಸಿ ಮಹಮ್ಮದ್ ಇಕ್ಬಾಲ್ (23) ಎಂದು ಗುರುತಿಸಲಾಗಿದೆ.

ಎಸಿಪಿ ಮಹೇಶ್ ಕುಮಾರ್ ನೇತೃತ್ವದ ತಂಡಕ್ಕೆ ಡಿಸಿಪಿಗಳಾದ ಹರಿರಾಮ್ ಶಂಕರ್ ಮತ್ತು ದಿನೇಶ್ ಕುಮಾರ್ ಮಾರ್ಗದರ್ಶನ ನೀಡಿದ್ದು, ಕಾವೂರು, ಬಜ್ಪೆ ಮತ್ತು ಮೂಡುಬಿದಿರೆ ಪೊಲೀಸ್ ಠಾಣೆಗಳ ಠಾಣಾಧಿಕಾರಿಗಳು ಮತ್ತು ಸಿಬ್ಬಂದಿಗಳು ಇದ್ದರು.

ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ. ಈ ಸಂಬಂಧ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!