Saturday, May 18, 2024
Homeಕೊಡಗುತಲಕಾವೇರಿಯಲ್ಲಿ ತೀರ್ಥೋದ್ಭವಕ್ಕೆ ಶುರುವಾಗಿದೆ ಕ್ಷಣಗಣನೆ: ಇಂದು ಸಂಜೆ 7 ಗಂಟೆ 21 ನಿಮಿಷಕ್ಕೆ ಪವಿತ್ರ ತೀರ್ಥೋದ್ಭವ

ತಲಕಾವೇರಿಯಲ್ಲಿ ತೀರ್ಥೋದ್ಭವಕ್ಕೆ ಶುರುವಾಗಿದೆ ಕ್ಷಣಗಣನೆ: ಇಂದು ಸಂಜೆ 7 ಗಂಟೆ 21 ನಿಮಿಷಕ್ಕೆ ಪವಿತ್ರ ತೀರ್ಥೋದ್ಭವ

spot_img
- Advertisement -
- Advertisement -

ಮಡಿಕೇರಿ : ತಲಕಾವೇರಿಯಲ್ಲಿ ತೀರ್ಥೋದ್ಭವಕ್ಕೆ ಕ್ಷಣಗಣನೆ ಶುರುವಾಗಿದೆ. ಇಂದು ಸಂಜೆ 7 ಗಂಟೆ 21 ನಿಮಿಷಕ್ಕೆ ಸಲ್ಲುವ ಮೇಷ ಲಗ್ನದಲ್ಲಿ ಶ್ರೀ ಮೂಲ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವದ ಪುಣ್ಯ ಕಾಲ ನೆರವೇರಲಿದೆ.

ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ಸಿ.ನಾಗೇಶ್, ಶಾಸಕರಾದ ಕೆ.ಜಿ.ಬೋಪಯ್ಯ, ಎಂ.ಪಿ.ಅಪ್ಪಚ್ಚುರಂಜನ್, ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಆಯನೂರು ಮಂಜುನಾಥ್, ಸಂಸದರಾದ ಪ್ರತಾಪ್ ಸಿಂಹ, ಕರ್ನಾಟಕ ಜೀವ ವೈವಿಧ್ಯ ಮಂಡಳಿ ಅಧ್ಯಕ್ಷರಾದ ನಾಪಂಡ ರವಿ ಕಾಳಪ್ಪ, ಮುಜರಾಯಿ, ಹಜ್ ಹಾಗೂ ವಕ್ಫ್ ಸಚಿವರಾದ ಶಶಿಕಲಾ ಅ.ಜೊಲ್ಲೆ, ಭಾಗಮಂಡಲ ಗ್ರಾ.ಪಂ. ಅಧ್ಯಕ್ಷರಾದ ಪೆಮಿತ, ಉಪಾಧ್ಯಕ್ಷರಾದ ಹೊಸೂರು ಸತೀಶ್ ಕುಮಾರ್ ಅವರು ಭಾಗವಹಿಸಲಿದ್ದಾರೆ.

ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ವಿ.ಅನ್ಬುಕುಮಾರ್, ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಜಿ.ಪಂ.ಸಿಇಒ ಭಂವರ್ ಸಿಂಗ್ ಮೀನಾ, ಉಪವಿಭಾಗಾಧಿಕಾರಿ ಡಾ.ಯತೀಶ್ ಉಲ್ಲಾಳ್, ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ ಆಯುಕ್ತರಾದ ರೋಹಿಣಿ ಸಿಂಧೂರಿ, ಜಿಲ್ಲಾ ಎಸ್ಪಿ ಎಂ.ಎ.ಅಯ್ಯಪ್ಪ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ, ತಹಶೀಲ್ದಾರ್ ಪಿ.ಎಸ್.ಮಹೇಶ್, ಭಗಂಡೇಶ್ವರ-ತಲಕಾವೇರಿ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಬಿ.ಎಂ.ಕೃಷ್ಣಪ್ಪ, ತಕ್ಕ ಮುಖ್ಯಸ್ಥರು, ಅರ್ಚಕರು ಮತ್ತು ಸಿಬ್ಬಂದಿ ವರ್ಗದವರು ಪಾಲ್ಗೊಳ್ಳಲಿದ್ದಾರೆ.

- Advertisement -
spot_img

Latest News

error: Content is protected !!