Sunday, December 3, 2023
Homeತಾಜಾ ಸುದ್ದಿಕಾವೇರಿ ಬಿಕ್ಕಟ್ಟು ಚರ್ಚಿಸಲು ದೆಹಲಿಯಲ್ಲಿ ಸಿಎಂ ನೇತೃತ್ವದಲ್ಲಿ ಸಭೆ

ಕಾವೇರಿ ಬಿಕ್ಕಟ್ಟು ಚರ್ಚಿಸಲು ದೆಹಲಿಯಲ್ಲಿ ಸಿಎಂ ನೇತೃತ್ವದಲ್ಲಿ ಸಭೆ

- Advertisement -
- Advertisement -

ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿವಾದ, ಕೇಂದ್ರ ಸರ್ಕಾರದ ಮುಂದೆ ಬಾಕಿಯಿರುವ ರಾಜ್ಯದ ಯೋಜನೆಗಳು ಹಾಗೂ ಬರ ಪರಿಹಾರ ವಿಷಯಗಳಿಗೆ ಸಂಬಂಧಿಸಿದಂತೆ ಚರ್ಚಿಸಲು ಇಂದು ದೆಹಲಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಿತು.

ದೆಹಲಿಯ ತಾಜ್ ಮಾನ್ ಸಿಂಗ್ ಹೋಟೆಲ್ ನಲ್ಲಿ ಸಭೆ ನಡೆದಿದ್ದು, ರಾಜ್ಯವನ್ನು ಪ್ರತಿನಿಧಿಸುವ ಕೇಂದ್ರದ ಸಚಿವರುಗಳು, ಲೋಕಸಭಾ ಸದಸ್ಯರು ಹಾಗೂ ರಾಜ್ಯಸಭಾ ಸದಸ್ಯರುಗಳು ಭಾಗವಹಿಸಿದ್ದಾರೆ.

ಈ ಸಭೆಯಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ‌‌.ಕೆ. ಶಿವಕುಮಾರ್ ನಿನ್ನೆ ಸಂಜೆಯೇ ನವದೆಹಲಿಗೆ ತಲುಪಿದ್ದರು.

ಕಾವೇರಿ ನೀರು ಬಿಡುಗಡೆಗೆ ಕರ್ನಾಟಕಕ್ಕೆ ನಿರ್ದೇಶನ ನೀಡುವಂತೆ ತಮಿಳುನಾಡಿನ ಸಂಸದರು ಪ್ರಧಾನಿ ಭೇಟಿ ಮಾಡಿದ ಬೆನ್ನಲ್ಲೇ ರಾಜ್ಯದ ಸಂಸದರ ಸಭೆಯನ್ನು ಸಿಎಂ ಸಿದ್ದರಾಮಯ್ಯ ನಡೆಸಿದ್ದಾರೆ.

- Advertisement -
spot_img

Latest News

error: Content is protected !!