Friday, June 26, 2026
Homeಪ್ರಮುಖ-ಸುದ್ದಿಬೆಳ್ಳಂಬೆಳಗ್ಗೆ ಕನಕಪುರ ಬಂಡೆಗೆ ಶಾಕ್ , ಡಿಕೆಶಿ ಮನೆ ಮೇಲೆ ಸಿಬಿಐ ದಾಳಿ

ಬೆಳ್ಳಂಬೆಳಗ್ಗೆ ಕನಕಪುರ ಬಂಡೆಗೆ ಶಾಕ್ , ಡಿಕೆಶಿ ಮನೆ ಮೇಲೆ ಸಿಬಿಐ ದಾಳಿ

- Advertisement -
- Advertisement -

ಬೆಂಗಳೂರು : ಸದಾಶಿವನಗರದಲ್ಲಿರುವ ಡಿ.ಕೆ.ಶಿವಕುಮಾರ್ ನಿವಾಸದ ಮೇಲೆ ಇಂದು ಐವರು ಸಿಬಿಐ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಡಿಕೆಶಿ ಮನೆಯ ಮೇಲೆ ದಾಳಿ ಮಾಡುವಂತೆ ರಾಜ್ಯ ಸರ್ಕಾರ ಸಿಬಿಐ ಅಧಿಕಾರಿಗಳಿಗೆ ಅನುಮತಿ ನೀಡಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ರಾಜ್ಯ ಸರ್ಕಾರದ ಅನುಮತಿ ಮೇರೆಗೆ ಇಂದು ಬೆಳಗ್ಗೆ 8 ಗಂಟೆಗೆ ಸಿಬಿಐ ಅಧಿಕಾರಿಗಳು ಏಕಾಏಕಿ ದಾಳಿ ಮಾಡಿದ್ದು, ಮನೆಯಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ. ಅಲ್ಲದೆ ಡಿಕೆಶಿಗೆ ಸೇರಿದ ಹಲವು ಕಡೆಗಳಲ್ಲಿ ಕೂಡ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಕಳೆದ ವರ್ಷ ಸೆಪ್ಟೆಂಬರ್ 3ರಂದು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿ ಡಿಕೆಶಿ ಜೈಲು ಸೇರಿದ್ದರು. ಇದೀಗ ಒಂದು ವರ್ಷ ಕಳೆಯುವ ಬೆನ್ನಲ್ಲೇ ಮತ್ತೆ ಸಿಬಿಐ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಡಿ.ಕೆ.ಶಿವಕುಮಾರ್ ಸಹೋದರ ಡಿ.ಕೆ.ಸುರೇಶ್ ಮನೆಯ ಮೇಲೂ ಸಿಬಿಐ ಅಧಿಕಾರಿಗಳು ದಾಳಿ ಮಾಡಿದ್ದು, ಅವರ ಮನೆಯಲ್ಲೂ ಶೋಧಕಾರ್ಯ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!