Thursday, June 25, 2026
Homeತಾಜಾ ಸುದ್ದಿಡಿ ಕೆ ಶಿವಕುಮಾರ್ ಗೆ ಮತ್ತೆ ಸಿಬಿಐ ಶಾಕ್ : ನ.23ಕ್ಕೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್

ಡಿ ಕೆ ಶಿವಕುಮಾರ್ ಗೆ ಮತ್ತೆ ಸಿಬಿಐ ಶಾಕ್ : ನ.23ಕ್ಕೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್

- Advertisement -
- Advertisement -

ಬೆಂಗಳೂರು : ಮಗಳ ಎಂಗೇಜ್ ಮೆಂಟ್ ಸಂಭ್ರಮದಲ್ಲಿರುವಾಗಲೇ ಸಿಬಿಐ ಮತ್ತೆ ಶಾಕ್ ನೀಡಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮತ್ತೆ ವಿಚಾರಣೆಗೆ ಹಾಜರಾಗುವಂತೆ ಡಿಕೆ ಶಿವಕುಮಾರ್ ಗೆ ಸಿಬಿಐ ಸಮನ್ಸ್ ಜಾರಿ ಮಾಡಿದೆ. ನವೆಂಬರ್ 23ರಂದು ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನಲ್ಲಿ ಸೂಚಿಸಿದೆ.

ಅಕ್ಟೋಬರ್ 5ರಂದು ಸಿಬಿಐ ಅಧಿಕಾರಿಗಳು ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಿವಾಸ, ಕಚೇರಿಗಳ ಮೇಲೆ ದಾಳಿ ನಡೆಸಿದ್ದರು. ಇದೀಗ ಸಿಬಿಐ ದಾಳಿಯ ಬಳಿಕ ಇದೇ ಮೊದಲ ಬಾರಿಗೆ ಸಿಬಿಐ ಡಿಕೆ ಶಿವಕುಮಾರ್ ಅವರಿಗೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿದೆ. ನವೆಂಬರ್ 23ರಕ್ಕೆ ದೆಹಲಿಯ ಸಿಬಿಐ ಕಚೇರಿಗೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿ ಮಾಡಿರುವ ಸಿಬಿಐ ಅಧಿಕಾರಿಗಳು, ಡಿಕೆ ಶಿವಕುಮಾರ್ ಗೆ ಶಾಕ್ ನೀಡಿದೆ.

ಈ ಕುರಿತಂತೆ ಪ್ರತಿಕ್ರಿಯಿಸಿರುವಂತ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಸಿಬಿಐ ನಿಂದ ವಿಚಾರಣೆಗೆ ಹಾಜರಾಗುವಂತೆ ಕರೆದಿದೆ. ನವೆಂಬರ್ 23ರಕ್ಕೆ ವಿಚಾರಣೆಗೆ ಬರುವಂತೆ ಸೂಚಿಸಿದೆ. ಹೀಗಾಗಿ ತಾವು ವಿಚಾರಣೆಗೆ ಹಾಜರಾಗುವುದಾಗಿಯೂ ತಿಳಿಸಿದ್ದಾರೆ.

- Advertisement -

Latest News

error: Content is protected !!