Thursday, June 4, 2026
Homeಕರಾವಳಿಮಂಗಳೂರಿನಲ್ಲಿಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 9 ಲಕ್ಷ ಮೌಲ್ಯದ ಮಾದಕ ವಸ್ತು ವಶ

ಮಂಗಳೂರಿನಲ್ಲಿಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 9 ಲಕ್ಷ ಮೌಲ್ಯದ ಮಾದಕ ವಸ್ತು ವಶ

- Advertisement -
- Advertisement -

ಮಂಗಳೂರಿನಲ್ಲಿ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ 9, ಲಕ್ಷ ಮೌಲ್ಯದ ಮಾದಕ ವಸ್ತುವನ್ನು ವಶಪಡಿಸಿಕೊಂಡಿದ್ದಾರೆ.ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಿದ್ದಾರೆ.

ಮೂಡು ಶೆಟ್ಟಿಯ ಇಮ್ರಾನ್, ಮಂಜನಾಡಿಯ ಅಬ್ದುಲ್ ಬಶೀರ್ ಅಬ್ಬಾಸ್, ಹಾಗೂ ಉಡುಪಿಯ ಬಡಗಬೆಟ್ಟು ನಿವಾಸಿ ಅಮ್ಜದ್ ಖಾನ್ ಬಂಧಿತ ಆರೋಪಿಗಳು .

ಆರೋಪಿಗಳಿಂದ ಸುಮಾರು 9, ಲಕ್ಷದ 170 ಗ್ರಾಂ ಎಂಡಿಎಂಎಯನ್ನು ಸಿಸಿಬಿ ತಂಡ ವಶಪಡಿಸಿಕೊಂಡಿದೆ. ಬೆಂಗಳೂರಿನಲ್ಲಿ ಎಂಡಿಎಂಎ ಖರೀದಿಸಿ ಮಂಗಳೂರಿಗೆ ತಂದಿದ್ದ ಆರೋಪಿಗಳು ಮಂಗಳೂರಿನ ಹೊರವಲಯ ಪ್ರದೇಶದಲ್ಲಿ ಮಾರಾಟಕ್ಕೆ ಯತ್ನಿಸುತ್ತಿದ್ದರು ಎನ್ನಲಾಗುತ್ತಿದೆ.

ಒಂದು ರಿಟ್ಸ್ ಕಾರು 6 ಮೊಬೈಲ್ ಡಿಜಿಟಲ್ ಮಾಪಕ ವಶಕ್ಕೆ ಪಡೆದ ಸಿಸಿಬಿ ಅಧಿಕಾರಿಗಳು ಡ್ರಗ್ಸ್ ಪ್ರಕರಣದಲ್ಲಿ ಇನ್ನೂ ಹಲವರು ಭಾಗಿಯಾಗಿರುವ ಅನುಮಾನ ವ್ಯಕ್ತವಾಗಿದ್ದು,ಉಳಿದ ಆರೋಪಿಗಳ ಪತ್ತೆಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಕ್ರಿಮಿನಲ್ ಹಿನ್ನೆಲೆಯ ಇಮ್ರಾನ್ ವಿರುದ್ಧ ಈಗಾಗಲೇ ಒಂಬತ್ತು ಕೇಸು ಇದೆ ಎಂದು ಹೇಳಲಾಗುತ್ತಿದೆ.ವಾರದ ಹಿಂದಷ್ಟೇ ಜಾಮೀನಿನ ಮೇಲೆ ಜೈಲಿನಿಂದ ಇಮ್ರಾನ್ ಹೊರ ಬಂದಿದ್ದ ಡ್ರಗ್ಸ್ ಪ್ರಕರಣ ಸಂಬಂಧ ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!