Thursday, June 4, 2026
Homeತಾಜಾ ಸುದ್ದಿಪರಪ್ಪನ ಅಗ್ರಹಾರ ಜೈಲಿಗೆ ಸಿಸಿಬಿ ಪೊಲೀಸರ ದಾಳಿ; ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗ ಸೇರಿದಂತೆ 18...

ಪರಪ್ಪನ ಅಗ್ರಹಾರ ಜೈಲಿಗೆ ಸಿಸಿಬಿ ಪೊಲೀಸರ ದಾಳಿ; ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗ ಸೇರಿದಂತೆ 18 ಜನರ ಮೊಬೈಲ್ ಸೀಝ್

- Advertisement -
- Advertisement -

ಬೆಂಗಳೂರು : ಪರಪ್ಪನ ಅಗ್ರಹಾರ ಜೈಲಿಗೆ ಸಿಸಿಬಿ ಪೊಲೀಸರು ದಾಳಿ ಮಾಡಿದ್ದಾರೆ. ದಾಳಿ ವೇಳೆ ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗ ಸೇರಿದಂತೆ 18 ಜನರ ಮೊಬೈಲ್ ಸೀಝ್ ಮಾಡಿದ್ದಾರೆ.

 ಜೈಲಿನಲ್ಲಿ ಇದ್ದುಕೊಂಡೇ ಧಮ್ಕಿ ಹಾಕುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಇಂದು ಬೆಳ್ಳಂಬೆಳಗ್ಗೆ ಸಿಸಿಬಿ ಪೊಲೀಸರು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನ ಮೇಲೆ ದಾಳಿ ಮಾಡಿದ್ದು, ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗ ಸೇರಿದಂತೆ 18 ಜನರ ಮೊಬೈಲ್ ಸೀಜ್ ಮಾಡಿದ್ದಾರೆ.

ಇಂದು ಪರಪ್ಪನ ಅಗ್ರಹಾರ ಜೈಲಿನ ಮೇಲೆ ದಾಳಿ ನಡೆಸಿರುವ ಸಿಸಿಬಿ ಅಧಿಕಾರಿಗಳು, ಜೈಲಿನಲ್ಲಿ ವಿಲ್ಸನ್ ಗಾರ್ಡ್ ನಾಗ ಸೇರಿದಂತೆ 18 ಸಹಚರರ ಮೊಬೈಲ್ ಗಳು, ಡ್ರಗ್ಸ್ ಹಾಗೂ ಹಣವನ್ನು ವಶಕ್ಕೆ ಪಡೆಯಲಾಗಿದೆ. ಕೆಲ ದಿನಗಳ ಹಿಂದೆ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಜೊತೆಗೆ ವಿಲ್ಸನ್ ಗಾರ್ಡನ್ ಕಾಣಿಸಿಕೊಂಡಿದ್ದ. ಬಳಿಕ ಪ್ರಕರಣ ದಾಖಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ.

ಪರಪ್ಪನ ಅಗ್ರಹಾರ ಜೈಲಿನ ಸ್ಪೆಷಲ್ ಬ್ಯಾರಕ್ ನ ಹೊರಗಡೆ ನಟ ದರ್ಶನ್, ವಿಲ್ಸನ್ ಗಾರ್ಡನ್ ನಾಗ ಹಾಗೂ ದರ್ಶನ್ ಅವರ ಮ್ಯಾನೇಜರ್ ನಾಗರಾಜ್ ಸೇರಿದಂತೆ ಮತ್ತೊಬ್ಬ ವ್ಯಕ್ತಿಯ ಜೊತೆ ದರ್ಶನ್ ಅವರು ಚೇರ್ ಮೇಲೆ ಕುಳಿತುಕೊಂಡು ಒಂದು ಕೈಯಲ್ಲಿ ಕಾಫಿ ಇನ್ನೊಂದು ಕೈಯಲ್ಲಿ ಸಿಗರೇಟ್ ಸೇದುತ್ತಿರುವ ಫೋಟೋ ವೈರಲ್ ಆಗಿತ್ತು.

- Advertisement -

Latest News

error: Content is protected !!