Wednesday, June 3, 2026
Homeಕರಾವಳಿಪುತ್ತೂರಿನಿಂದ ಕಾರ್ಕಳಕ್ಕೆ ವರ್ಗಾವಣೆಗೊಂಡ ಸಿಡಿಪಿಓ ಶ್ರೀಲತಾ

ಪುತ್ತೂರಿನಿಂದ ಕಾರ್ಕಳಕ್ಕೆ ವರ್ಗಾವಣೆಗೊಂಡ ಸಿಡಿಪಿಓ ಶ್ರೀಲತಾ

- Advertisement -
- Advertisement -

ಪುತ್ತೂರು: ಪುತ್ತೂರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಶ್ರೀಲತಾರವರು ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿಗೆ ವರ್ಗಾವಣೆಗೊಂಡಿದ್ದಾರೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ವಿವಿಧ ಅಧಿಕಾರಿಗಳನ್ನು ಸಾರ್ವಜನಿಕ ಮತ್ತು ಆಡಳಿತಾತ್ಮಕ ಹಿತದೃಷ್ಠಿಯಿಂದ ವರ್ಗಾವಣೆಗೊಳಿಸಲಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಶ್ರೀಲತಾ ಅವರನ್ನು ವರ್ಗಾವಣೆಗೊಳಿಸಲಾಗಿದೆ. 

2020ರ ಫೆಬ್ರವರಿಯಲ್ಲಿ ಪುತ್ತೂರಿಗೆ ಪೂರ್ಣಕಾಲಿಕ ಶಿಶು ಅಭಿವೃದ್ಧಿ ಯೋಜನಾಧಿಕಾರಿಯಾಗಿ ವರ್ಗಾವಣೆಗೊಂಡಿದ್ದ ಅವರು ಸುಮಾರು ಏಳು ವರ್ಷಗಳ ಕಾಲ ಪ್ರಭಾರವಾಗಿದ್ದ ಶಿಶು ಅಭಿವೃದ್ಧಿ ಅಧಿಕಾರಿಯ ಸ್ಥಾನವನ್ನು ಭರ್ತಿ ಮಾಡಿದ್ದರು. ನಂತರ ಮೂರು ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಿದ್ದರು. ಇನ್ನು ಶ್ರೀಲತಾರವರ ವರ್ಗಾವಣೆಯಿಂದ ತೆರವಾದ ಸ್ಥಾನಕ್ಕೆ ಯಾರೆಂಬುದು ಆದೇಶದಲ್ಲಿಯೂ ಸೂಚಿಸದೆ ಇರುವುದರಿಂದ ಮತ್ತೆ ಆ ಸ್ಥಾನ ಖಾಲಿಯಾಗಲಿದೆ ಎಂದು ತಿಳಿದು ಬಂದಿದೆ.

- Advertisement -

Latest News

error: Content is protected !!