Sunday, June 7, 2026
Homeಉದ್ಯಮಚಿನ್ನಪ್ರಿಯರಿಗೆ ಸಿಹಿಸುದ್ದಿ ನೀಡಿದ ಕೇಂದ್ರ ಬಜೆಟ್

ಚಿನ್ನಪ್ರಿಯರಿಗೆ ಸಿಹಿಸುದ್ದಿ ನೀಡಿದ ಕೇಂದ್ರ ಬಜೆಟ್

- Advertisement -
- Advertisement -

ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು ಮಂಗಳವಾರ ಲೋಕಸಭೆಯಲ್ಲಿ ಮಂಡಿಸಿದ್ದ 2024-2025ನೇ ಸಾಲಿನ ಬಜೆಟ್‌ ನಲ್ಲಿ ಚಿನ್ನದ ಮೇಲಿನ ಆಮದು ಸುಂಕವನ್ನು ಶೇ.15ರಿಂದ ಶೇ.6ಕ್ಕೆ ಇಳಿಕೆ ಮಾಡಿರುವುದಾಗಿ ಘೋಷಿಸಿದ್ದಾರೆ. 

ಬೆಳ್ಳಿ ಮೇಲಿನ ತೆರಿಗೆಯನ್ನು ಕೂಡ ಕೇಂದ್ರ ಸರ್ಕಾರ ಕಡಿತಗೊಳಿಸಿದೆ. ಅಮೂಲ್ಯ ಲೋಹಗಳಾದ ಆಮದು ಚಿನ್ನದ ಮೇಲಿನ ಸುಂಕವನ್ನು ಶೇ.15ರಿಂದ ಶೇ.6ಕ್ಕೆ ಇಳಿಕೆ ಮಾಡಿದ್ದು, ಆಮದು ಬೆಳ್ಳಿಯ ಸುಂಕವನ್ನು ಶೇ.14.35ರಿಂದ ಶೇ.5.35ಕ್ಕೆ ಇಳಿಕೆ ಮಾಡಲಾಗಿದೆ. ಚಿನ್ನ, ಬೆಳ್ಳಿಯ ಮೇಲಿನ ಆಮದು ಸುಂಕವನ್ನು ಕಡಿತಗೊಳಿಸಿದ್ದರಿಂದ ದೇಶೀಯವಾಗಿ ಚಿನ್ನದ ಬೇಡಿಕೆ ಹೆಚ್ಚಳವಾಗಲಿದ್ದು, ಚಿನ್ನ ಕಳ್ಳಸಾಗಣೆ ತಡೆಯಲು ನೆರವಾಗಲಿದೆ ಎಂದು ಇಂಡಸ್ಟ್ರಿ ತಜ್ಞರು ಅಭಿಪ್ರಾಯವ್ಯಕ್ತಪಡಿಸಿದ್ದಾರೆ.

ನಿರ್ಮಲಾ ಸೀತಾರಾಮನ್‌ ಅವರು ಈ ಕುರಿತಂತೆ, “ಚಿನ್ನಕ್ಕೆ ಭಾರತದಲ್ಲಿ ಹೆಚ್ಚಿನ ಬೇಡಿಕೆಯಿದ್ದು, ಜಾಗತಿಕ ಮಟ್ಟದಲ್ಲಿ ಚಿನ್ನದ ಬೆಲೆ ಏರಿಕೆಯಾಗುತ್ತಿದ್ದು, ಭಾರತದಲ್ಲೂ ಚಿನ್ನದ ಬೆಲೆ ಭಾರೀ ಹೆಚ್ಚಳವಾಗಿದೆ. ಈ ನಿಟ್ಟಿನಲ್ಲಿ ಆಮದು ಚಿನ್ನದ ಮೇಲಿನ ಸುಂಕವನ್ನು ಕಡಿತಗೊಳಿಸಿರುವುದಾಗಿ ತಿಳಿಸಿದ್ದಾರೆ.

ಅಷ್ಟೇ ಅಲ್ಲದೇ ನಿರ್ಮಲಾ ಸೀತಾರಾಮನ್ ಅವರು, ಲಿಥಿಯಂ ಸೇರಿದಂತೆ 25 ಅಪಾಯಕಾರಿ ಖನಿಜಗಳ ಮೇಲಿನ ಆಮದು ಸುಂಕಕ್ಕೆ ವಿನಾಯತಿ ನೀಡುವುದಾಗಿ ಘೋಷಿಸಿದ್ದಾರೆ.

- Advertisement -

Latest News

error: Content is protected !!