Friday, June 5, 2026
Homeತಾಜಾ ಸುದ್ದಿಅಡಿಕೆ ಎಲೆಚುಕ್ಕಿ ರೋಗದ ಬಗ್ಗೆ ಅಧ್ಯಯನ ನಡೆಸಲು ಕೇಂದ್ರ ಸಮಿತಿ ರಾಜ್ಯಕ್ಕೆ ಆಗಮನ: ಆರಗ ಜ್ಞಾನೇಂದ್ರ

ಅಡಿಕೆ ಎಲೆಚುಕ್ಕಿ ರೋಗದ ಬಗ್ಗೆ ಅಧ್ಯಯನ ನಡೆಸಲು ಕೇಂದ್ರ ಸಮಿತಿ ರಾಜ್ಯಕ್ಕೆ ಆಗಮನ: ಆರಗ ಜ್ಞಾನೇಂದ್ರ

- Advertisement -
- Advertisement -

ಶಿವಮೊಗ್ಗ: ಕರಾವಳಿ ಹಾಗೂ ಮಲೆನಾಡು ಭಾಗದ ರೈತರು ಅಡಿಕೆ ಎಲೆಚುಕ್ಕಿ ರೋಗದಿಂದ ಕಂಗಾಲಾಗಿದ್ದಾರೆ. ಇದೀಗ ರಾಜ್ಯಕ್ಕೆ ಕೇಂದ್ರ ಸರ್ಕಾರದ ಏಳು ಮಂದಿ ತಜ್ಞರನ್ನು ಒಳಗೊಂಡ ಸಮಿತಿ ರಾಜ್ಯದ ಅಡಿಕೆ ತೋಟಗಳಲ್ಲಿ ಹಬ್ಬಿರುವ ಎಲೆಚುಕ್ಕೆ ರೋಗದ ಬಗ್ಗೆ ಅಧ್ಯಯನ ನಡೆಸಿ ಪರಿಹಾರ ಕಂಡುಕೊಳ್ಳಲು ಮುಂದಿನ ವಾರ ರಾಜ್ಯಕ್ಕೆ ಆಗಮಿಸಲಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಶಿವಮೊಗ್ಗದಲ್ಲಿ ಮಾತನಾಡಿದ ಸಚಿವರು ರೈತರು ಎದುರಿಸುತ್ತಿರುವ ಸಂಕಷ್ಟಕ್ಕೆ ಕೇಂದ್ರ ತಕ್ಷಣ ಸ್ಪಂದಿಸಿದ್ದು, ಅಡಿಕೆ ಬೆಳೆಗೆ ಎದುರಾಗಿರುವ ರೋಗ ನಿವಾರಣೆಗೆ ಸಮಿತಿ ಪರಿಹಾರ ಕಂಡುಕೊಳ್ಳಲು ಸಹಕಾರಿಯಾಗಲಿದೆ ಎಂದಿದ್ದಾರೆ.

- Advertisement -

Latest News

error: Content is protected !!