Saturday, May 18, 2024
Homeತಾಜಾ ಸುದ್ದಿಮೇ 10 ರಂದು ವಿಧಾನಸಭಾ ಚುನಾವಣೆ ಹಿನ್ನೆಲೆ; ಎಲ್ಲಾ ನೌಕರರಿಗೆ ವೇತನ ಸಹಿತ ರಜೆ ನೀಡಲು...

ಮೇ 10 ರಂದು ವಿಧಾನಸಭಾ ಚುನಾವಣೆ ಹಿನ್ನೆಲೆ; ಎಲ್ಲಾ ನೌಕರರಿಗೆ ವೇತನ ಸಹಿತ ರಜೆ ನೀಡಲು ನೀಡುವಂತೆ ಕೇಂದ್ರ ಚುನಾವಣಾ ಆಯೋಗ ಸೂಚನೆ

spot_img
- Advertisement -
- Advertisement -

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆ 2023 ಮುಹೂರ್ತ ಫಿಕ್ಸ್ ಆಗಿದ್ದು ಮೇ.10ರಂದು ಮತದಾನ ನಡೆಯಲಿದ್ದು, ಮೇ.13ರಂದು ಫಲಿತಾಂಶ ಹೊರ ಬೀಳಲಿದೆ. ಹೀಗಾಗಿ ಮತದಾನದ ದಿನದಂದು ಎಲ್ಲಾ ನೌಕರರಿಗೆ ವೇತನ ಸಹಿತ ರಜೆಯನ್ನು ನೀಡುವಂತೆ ಕೇಂದ್ರ ಚುನಾವಣಾ ಆಯೋಗ ಸೂಚಿಸಿದೆ.

ಈ ಸಂಬಂಧ ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಸಂಜೀವ್ ಕುಮಾರ್ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ರಾಜ್ಯ ಚುನಾವಣಾ ಆಯೋಗದ ಮುಖ್ಯ ಆಯುಕ್ತರಿಗೆ ಪತ್ರ ಬರೆದಿದ್ದು, ದಿನಾಂಕ 29-03-2023ರಂದು ಕರ್ನಾಟಕ ವಿಧಾನಸಭೆಗೆ ಚುನಾವಣೆ ಘೋಷಣೆ ಮಾಡಲಾಗಿದೆ. ದಿನಾಂಕ 10-05-2023ರಂದು ಮತದಾನ ನಿಗದಿ ಪಡಿಸಲಾಗಿದೆ ಎಂದಿದ್ದಾರೆ.

ರಾಜ್ಯ ವಿಧಾಸಭಾ ಚುನಾವಣೆಯ ಹಿನ್ನಲೆಯಲ್ಲಿ ಕೇಂದ್ರ ಹಾಗೂ ರಾಜ್ಯದ ಎಲ್ಲಾ ಮತದಾರರು ಮತ ಚಲಾಯಿಸಲು ಅನುಕೂಲವಾಗುವಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸ್ವಾಮ್ಯಕ್ಕೆ ಒಳಪಟ್ಟ ಸಂಸ್ಥೆಗಳಿಗೆ, ಸರ್ಕಾರಿ ಹಾಗೂ ಖಾಸಗಿ, ಅನುದಾನಿತ, ಅನುದಾನರಹಿತ ಶಿಕ್ಷಣ ಸಂಸ್ಥೆಗಳಿಗೆ, ಔಧ್ಯಮಿಕ ಸಂಸ್ಥೆಗಳ ಹಾಗೂ ಇನ್ನಿತರ ಸಂಸ್ಥೆಗಳಿಗೆ ಮೇ.10ರಂದು ಸಾರ್ವತ್ರಿಕ ರಜೆ ಘೋಷಿಸುವಂತೆ ತಿಳಿಸಿದ್ದಾರೆ.

ಎಲ್ಲಾ ವ್ಯವಹಾರಿಕ ಸಂಸ್ಥೆಗಳು, ಔಧ್ಯಮಿಕ ಸಂಸ್ಥೆಗಳು ಮತ್ತು ಇನ್ನಿತರ ಎಸ್ಟಾಬ್ಲಿಷ್ ಮೆಂಟ್ ಗಳಲ್ಲಿ ಖಾಯಂ ಅಥವಾ ದಿನಗೂಲಿ ಮೇಲೆ ಕೆಲಸ ನಿರ್ವಹಿಸುತ್ತಿರುವ ಎಲ್ಲಾ ನೌಕರರಿಗೆ ಮತದಾನ ಮಾಡಲು ಅನನಕೂಲವಾಗುವಂತೆ ರೆಪ್ರೆಸೆಂಟೇಷನ್ ಆಫ್ ಪೀಪಲ್ ಆಕ್ಟ್ 1951ರ ಕಲಂ 135ಬಿ ರಡಿಯಲ್ಲಿ ವೇತನ ಸಹಿತ ರಜೆ ನೀಡುಲು ಸೂಚಿಸಿದ್ದಾರೆ.

ಕೇಂದ್ರ ಚುನಾವಣಾ ಆಯೋಗದ ಸೂಚನೆಯ ಮೇರೆಗೆ ಶೀಘ್ರವೇ ರಾಜ್ಯದ ಮುಖ್ಯ ಚುನಾವಣಾ ಆಯುಕ್ತರು ಆದೇಶ ಹೊರಡಿಸಲಿದ್ದಾರೆ. ಅದರಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಮೇ.10ರಂದು ನೆಗೋಯಬಲ್ ಇನ್ ಸ್ಟೋಮೆಂಟ್ ಆಕ್ಟ್ 1881, ಕಲಂ 25ರಡಿ ಮತ್ತು ರೆಪ್ರೆಸೆಂಟೇಷನ್ ಆಫ್ ಪೀಪಲ್ ಆಕ್ಟ್ 1951ರ ಕಲಂ 135ಬಿ ರಡಿಯಲ್ಲಿ ವೇತನ ಸಹಿತ ರಜೆಯನ್ನು ಮೇ.10ರಂದು ಘೋಷಣೆ ಮಾಡಲಿದ್ದಾರೆ.

- Advertisement -
spot_img

Latest News

error: Content is protected !!