Saturday, June 27, 2026
Homeಇತರಗಾಂಧಿ ಕುಟುಂಬಕ್ಕೆ ಮತ್ತೆ ಶಾಕ್ - 3 ಟ್ರಸ್ಟ್ ಅವ್ಯವಹಾರ ವಿರುದ್ಧ ಕೇಂದ್ರದ ತನಿಖೆ!

ಗಾಂಧಿ ಕುಟುಂಬಕ್ಕೆ ಮತ್ತೆ ಶಾಕ್ – 3 ಟ್ರಸ್ಟ್ ಅವ್ಯವಹಾರ ವಿರುದ್ಧ ಕೇಂದ್ರದ ತನಿಖೆ!

- Advertisement -
- Advertisement -

ನವದೆಹಲಿ: ಗಾಂಧಿ ಕುಟುಂಬಕ್ಕೆ ಇದೀಗ ಮತ್ತೆ ಶಾಕ್ ಎದುರಾಗಿದೆ. ಹಣಕಾಸು ಅವ್ಯವಹಾರಕ್ಕೆ ಸಂಬಂಧಿಸಿದಂತೆ ಗಾಂಧಿ ಕುಟುಂಬದ ಮೂರು ಟ್ರಸ್ಟ್ ಗಳಾದ ರಾಜೀವ್ ಗಾಂಧಿ ಫೌಂಡೇಶನ್, ರಾಜೀವ್ ಗಾಂಧಿ ಚಾರಿಟೇಬಲ್ ಟ್ರಸ್ಟ್ ಮತ್ತು ಇಂದಿರಾಗಾಂಧಿ ಮೆಮೋರಿಯಲ್ ಟ್ರಸ್ಟ್ ಮೇಲೆ ಆದಾಯ ತೆರಿಗೆ ಮತ್ತು ವಿದೇಶಿ ದೇಣಿಗೆ ನಿಯಮ ಉಲ್ಲಂಘನೆ ಆರೋಪದ ಮೇಲೆ ತನಿಖೆ ನಡೆಸುವುದಾಗಿ ಗೃಹ ಸಚಿವಾಲಯ ತಿಳಿಸಿದೆ.

ಗೃಹ ಸಚಿವಾಲಯದ ವಕ್ತಾರ ಈ ವಿಷಯವನ್ನು ಖಚಿತಪಡಿಸಿದ್ದು, ಜಾರಿ ನಿರ್ದೇಶನಾಲಯದ ಮುಖ್ಯಸ್ಥರು ಈ ಸಮಿತಿಯ ಮುಖ್ಯಸ್ಥರು ಎಂದು ಹೇಳಿದೆ. ಅಷ್ಟೇ ಅಲ್ಲ ಈ ಅವ್ಯವಹಾರ ತನಿಖೆಯ ಸಮಿತಿಯಲ್ಲಿ ಸಿಬಿಐ ಕೂಡಾ ಒಂದು ಭಾಗವಾಗಿದೆ ಎಂದು ಹೇಳಿದೆ.

ರಾಜೀವ್ ಗಾಂಧಿ ಫೌಂಡೇಶನ್ ಗೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಕಾಂಗ್ರೆಸ್ ಮುಖಂಡರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಚಿದಂಬರಂ ಟ್ರಸ್ಟಿಗಳಾಗಿದ್ದಾರೆ. ಈ ಟ್ರಸ್ಟ್ ಅನ್ನು 1991ರಲ್ಲಿ ಸ್ಥಾಪಿಸಲಾಗಿತ್ತು. ರಾಜೀವ್ ಗಾಂಧಿ ಫೌಂಡೇಶನ್ ಮತ್ತು ರಾಜೀವ್ ಗಾಂಧಿ ಚಾರಿಟೇಬಲ್ ಗೆ ಸೋನಿಯಾ ಗಾಂಧಿ ಅವರು ಅಧ್ಯಕ್ಷರಾಗಿದ್ದರು. ಅಷ್ಟೇ ಅಲ್ಲ ಸೋನಿಯಾ ಅವರು ಇಂದಿರಾ ಗಾಂಧಿ ಮೆಮೋರಿಯಲ್ ಟ್ರಸ್ಟ್ ನ ವಿದೇಶಿ ಕಾರ್ಯ, ವ್ಯವಹಾರದ ಬಗ್ಗೆಯೂ ನೋಡಿಕೊಳ್ಳುತ್ತಿದ್ದರು ಎಂದು ವರದಿ ತಿಳಿಸಿದೆ.

- Advertisement -

Latest News

error: Content is protected !!