Sunday, June 7, 2026
HomeWorldಕೇಂದ್ರ ಸರ್ಕಾರದಿಂದ ನಾಳೆ ಸರ್ವಪಕ್ಷ ಸಭೆ; ಆಪರೇಷನ್‌ ಸಿಂಧೂರದ ಬಗ್ಗೆ ಮಾಹಿತಿ

ಕೇಂದ್ರ ಸರ್ಕಾರದಿಂದ ನಾಳೆ ಸರ್ವಪಕ್ಷ ಸಭೆ; ಆಪರೇಷನ್‌ ಸಿಂಧೂರದ ಬಗ್ಗೆ ಮಾಹಿತಿ

- Advertisement -
- Advertisement -

ನವದೆಹಲಿ: ಭಾರತ ಸೇನೆಯು ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ‘ಆಪರೇಷನ್‌ ಸಿಂಧೂರ್’ಕಾರ್ಯಾಚರಣೆ ನಡೆಸಿದ್ದು, ಮಾಹಿತಿಯ ಪ್ರಕಾರ 100ಕ್ಕೂ ಹೆಚ್ಚು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಪಾಕಿಸ್ತಾನದ 4 ಮತ್ತು ಪಿಒಕೆಯ 5 ಉಗ್ರರ ನೆಲೆಗಳನ್ನು ಭಾರತೀಯ ಸೇನೆಯು ಧ್ವಂಸಗೊಳಿಸಿದ ಬೆನ್ನಲ್ಲೇ ನಾಳೆ ಬೆಳಿಗ್ಗೆ 11 ಗಂಟೆಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ನೇತೃತ್ವದಲ್ಲಿ ಸರ್ವಪಕ್ಷ ಸಭೆ ನಡೆಯಲಿದೆ.

ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಸಚಿವ ಕಿರಣ್‌ ರಿಜಿಜು ಸೇರಿದಂತೆ ಸರ್ವ ಪಕ್ಷದ ನಾಯಕರು ಭಾಗಿಯಾಗುವ ಸಾಧ್ಯತೆಯಿದ್ದು, ಸಭೆಯಲ್ಲಿ ಆಪರೇಷನ್‌ ಸಿಂಧೂರ ಬಗ್ಗೆ ಎಲ್ಲಾ ಪಕ್ಷಗಳಿಗೂ ಕೇಂದ್ರ ಸಚಿವರು ಮಾಹಿತಿ ನೀಡಲಿದ್ದಾರೆ.

- Advertisement -

Latest News

error: Content is protected !!