Sunday, June 7, 2026
Homeಕರಾವಳಿಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣ; ಪ್ರಕರಣವನ್ನು ಎನ್‌ಐಎ ತನಿಖೆಗೆ ವರ್ಗಾಯಿಸಿ ಕೇಂದ್ರ ಗೃಹ ಸಚಿವಾಲಯ...

ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣ; ಪ್ರಕರಣವನ್ನು ಎನ್‌ಐಎ ತನಿಖೆಗೆ ವರ್ಗಾಯಿಸಿ ಕೇಂದ್ರ ಗೃಹ ಸಚಿವಾಲಯ ಆದೇಶ

- Advertisement -
- Advertisement -

ಬೆಂಗಳೂರು: ಮಂಗಳೂರಿನಲ್ಲಿ ನಡೆದ ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣವನ್ನು ರಾಜ್ಯ ಸರ್ಕಾರವು ಎನ್‌ಐಎ ತನಿಖೆಗೆ ಶಿಫಾರಸ್ಸು ಮಾಡಿದ ಬೆನ್ನಲ್ಲೇ ಕೇಂದ್ರ ಗೃಹ ಸಚಿವಾಲಯದಿಂದ ಎನ್‌ಐಎ ತನಿಖೆಗೆ ವರ್ಗಾಯಿಸಿ ಆದೇಶಿಸಿದೆ.

ಈ ಸಂಬಂಧ ಕೇಂದ್ರ ಗೃಹ ಸಚಿವಾಲಯದಿಂದ ಆದೇಶ ಹೊರಡಿಸಲಾಗಿದ್ದು, ಕರ್ನಾಟಕ ಸರ್ಕಾರದ ಶಿಫಾರಸ್ಸಿನ ಮೇರೆಗೆ ಮಂಗಳೂರಿನ ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ ವಹಿಸಲಾಗಿದೆ. ಯುಎಪಿಎ ಕಾಯ್ದೆಯ ಅಡಿಯಲ್ಲಿ ಶಿಫಾರಸ್ಸು ಮಾಡಿದಂತೆ ಎನ್‌ಐಎ ತನಿಖೆಗೆ ವಹಿಸಿ ಆದೇಶಿಸಿದೆ.

ರಾಜ್ಯ ಸರ್ಕಾರದಿಂದ ಸಾಕ್ಷ್ಯಾಧಾರಗಳು, ಮಾಹಿತಿಗಳ ಆಧಾರದ ಮೇಲೆ ಯುಎಪಿಎ ಕಾಯ್ದೆಯ ಅಡಿಯಲ್ಲಿ ಎನ್‌ಐಎ ತನಿಖೆಗೆ ವಹಿಸುವಂತೆ ಕೇಂದ್ರಕ್ಕೆ ಶಿಫಾರಸ್ಸು ಮಾಡಿತ್ತು. ಈ ಶಿಫಾರಸ್ಸಿನ ಬೆನ್ನಲ್ಲೇ ಕೇಂದ್ರ ಸರ್ಕಾರ ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣವನ್ನು ಎನ್‌ಐಎಗೆ ಅಧಿಕೃತವಾಗಿ ವಹಿಸಿದೆ.

- Advertisement -

Latest News

error: Content is protected !!