Monday, June 8, 2026
Homeತಾಜಾ ಸುದ್ದಿರಾಜ್ಯದ ಕೊರೋನಾ ನಿಯಂತ್ರಣ ಕ್ರಮಕ್ಕೆ ಶಹಬ್ಬಾಸ್ ಎಂದ ಕೇಂದ್ರ ಸರ್ಕಾರ

ರಾಜ್ಯದ ಕೊರೋನಾ ನಿಯಂತ್ರಣ ಕ್ರಮಕ್ಕೆ ಶಹಬ್ಬಾಸ್ ಎಂದ ಕೇಂದ್ರ ಸರ್ಕಾರ

- Advertisement -
- Advertisement -

ನವದೆಹಲಿ: ಮಹಾಮಾರಿ ಕೊರೋನಾ ವೈರಸ್ ನಿಯಂತ್ರಿಸಲು ರಾಜ್ಯ ಸರ್ಕಾರ ತೆಗೆದುಕೊಂಡ ಕ್ರಮಗಳ ಬಗ್ಗೆ ಕೇಂದ್ರ ಸರ್ಕಾರ ಮೆಚ್ಚುಗೆ ವ್ಯಕ್ತಪಡಿಸಿದ್ದು, ಕರ್ನಾಟಕದ ಮಾದರಿ ಅನುಸರಿಸುವಂತೆ ಇತರೆ ರಾಜ್ಯಗಳಿಗೆ ಸೂಚಿಸಿದೆ.

ಕೊರೋನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಮಾದರಿಯನ್ನು ಅನುಸರಿಸುವಂತೆ ಕೇಂದ್ರ ಆರೋಗ್ಯ ಸಚಿವಾಲಯ ಇತರೆ ರಾಜ್ಯ ಸರ್ಕಾರಗಳಿಗೆ ಸೂಚಿಸಿದೆ.

ಕರ್ನಾಟಕದಲ್ಲಿ ಸೋಂಕಿತರ ಸಂಪರ್ಕ ಉಳ್ಳವರನ್ನು ಶೀಘ್ರ ಪತ್ತೆ ಮಾಡುತ್ತಿರುವುದಕ್ಕೆ ಹಾಗೂ ಮನೆ–ಮನೆ ಆರೋಗ್ಯ ಸಮೀಕ್ಷೆ ಕೈಗೊಂಡಿರುವುದಕ್ಕೆ ಕೇಂದ್ರ ಸರ್ಕಾರ ಮೆಚ್ಚುಗೆ ವ್ಯಕ್ತಪಡಿಸಿದೆ. ಕೋವಿಡ್ ಹರಡುವಿಕೆ ತಡೆಗಟ್ಟುವ ಸಲುವಾಗಿ ಕರ್ನಾಟಕದಲ್ಲಿ ಈಗಾಗಲೇ 1.5 ಕೋಟಿಗೂ ಹೆಚ್ಚು ಮಂದಿಯ ಸಮೀಕ್ಷೆ ನಡೆಸಲಾಗಿದೆ ಎಂದು ಆರೋಗ್ಯ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

- Advertisement -

Latest News

error: Content is protected !!