Tuesday, June 23, 2026
Homeತಾಜಾ ಸುದ್ದಿ2023ರ ಸಿಇಟಿ ಫಲಿತಾಂಶ ಪ್ರಕಟ

2023ರ ಸಿಇಟಿ ಫಲಿತಾಂಶ ಪ್ರಕಟ

- Advertisement -
- Advertisement -

ಬೆಂಗಳೂರು : 2023ರ ಸಿಇಟಿ ಫಲಿತಾಂಶ ಪ್ರಕಟವಾಗಿದೆ. ಈ ಬಾರಿಯೂ  ಫಲಿತಾಂಶದಲ್ಲಿ ಹುಡುಗಿಯರದ್ದೇ ಮೇಲುಗೈ ಆಗಿದೆ. ಉನ್ನತ ಶಿಕ್ಷಣ ಸಚಿವ ಸುಧಾಕರ್ ಸಿಇಟಿ ಫಲಿತಾಂಶವನ್ನು ಪ್ರಕಟಿಸಿದ್ದು, ಇಂಜಿನಿಯರಿಂಗ್ ವಿಭಾಗದಲ್ಲಿ ವಿಘ್ನೇಶ್ ಪ್ರಥಮ ಸ್ಥಾನ ಪಡೆದರೆ, ಅರ್ಜುನ್ ಕೃಷ್ಣಸ್ವಾಮಿ ದ್ವಿತೀಯ ಸ್ಥಾನ, ಸಮೃದ್ಧ್ ಶೆಟ್ಟಿ 3 ನೇ ಸ್ಥಾನ, ಎಸ್. ಸುಮೇಧ್ ಗೆ 4 ನೇ ಸ್ಥಾನ,ಮಾಧವ ಸೂರ್ಯ 5 ನೇ ಸ್ಥಾನ ಪಡೆದಿದ್ದಾರೆ.

ಫಲಿತಾಂಶವು ಬೆಳಿಗ್ಗೆ 11ರ ನಂತರ ಕೆಇಎ ವೆಬ್ ಸೈಟ್ https://kea.kar.nic.in ದಲ್ಲಿ ಸಿಗಲಿದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ತಿಳಿಸಿದ್ದಾರೆ.

ಫಲಿತಾಂಶ ಪರಿಶೀಲಿಸುವುದು ಹೇಗೆ?

ಫಲಿತಾಂಶ ಪ್ರಕಟವಾದ ನಂತರ, ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕದ ಮೂಲಕ ಅದನ್ನು ಡೌನ್‌ಲೋಡ್ ಮಾಡಲು ಸಾಧ್ಯವಾಗುತ್ತದೆ. KCET ಸ್ಕೋರ್ ಕಾರ್ಡ್ ಅನ್ನು ಅಧಿಕೃತ ವೆಬ್‌ಸೈಟ್‌ಗಳಾದ kea.kar.nic.in, cetonline.karnataka.gov.in ಮತ್ತು karresults.nic.in ನಿಂದ ಡೌನ್‌ಲೋಡ್ ಮಾಡಿಕೊಳ್ಳಬಹುದು. ಅಭ್ಯರ್ಥಿಗಳು ತಮ್ಮ ಕರ್ನಾಟಕ CET ಫಲಿತಾಂಶ 2023 ಅನ್ನು ಪ್ರವೇಶಿಸಲು ತಮ್ಮ ನೋಂದಣಿ ಸಂಖ್ಯೆಯನ್ನು ನಮೂದಿಸಬೇಕು.

- Advertisement -

Latest News

error: Content is protected !!