Saturday, October 17, 2026
Homeತಾಜಾ ಸುದ್ದಿಜುಲೈ 30 ರಂದು ಸಿಇಟಿ ಫಲಿತಾಂಶ

ಜುಲೈ 30 ರಂದು ಸಿಇಟಿ ಫಲಿತಾಂಶ

- Advertisement -
- Advertisement -

ಬೆಂಗಳೂರು: ಜೂನ್ ಮಧ್ಯಭಾಗದಲ್ಲಿ ನಡೆಸಲಾಗಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಇಟಿ) ಫಲಿತಾಂಶ ಜುಲೈ 30ರಂದು ಪ್ರಕಟವಾಗಲಿದೆ.

ಉನ್ನತ ಶಿಕ್ಷಣ ಸಚಿವ ಡಾ. ಸಿ. ಎನ್. ಅಶ್ವತ್ಥ ನಾರಾಯಣ ಇಂದು ಫಲಿತಾಂಶದ ಬಗ್ಗೆ ಮಾಹಿತಿ ನೀಡಿದ್ದಾರೆ.

ಸಿಇಟಿ ಪರೀಕ್ಷೆ ನಡೆಸುವಾಗ ಸಿಬಿಎಸ್ ಸಿ ಮತ್ತು ಐಸಿಎಸ್ಇ ಪಠ್ಯಕ್ರಮದಲ್ಲಿ 12ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿಗಳಿಗೂ ಅವಕಾಶ ಕೊಡಲಾಗಿತ್ತು. ಈಗ ಅವರ ಫಲಿತಾಂಶ ಬಂದಿದ್ದು, ಸಿಇಟಿ ಬರೆದಿದ್ದ ಈ ವಿದ್ಯಾರ್ಥಿಗಳು, ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ ಸೈಟ್ ನಲ್ಲಿ ತಮ್ಮ ಅಂಕಗಳನ್ನು ನಾಳೆ (ಜು.26) ಸಂಜೆಯೊಳಗೆ ಅಪ್ಲೋಡ್ ಮಾಡಬೇಕು ಎಂದು ಸಚಿವ ಡಾ. ಅಶ್ವಥ್ ನಾರಾಯಣ ತಿಳಿಸಿದ್ದಾರೆ.

ವಿವಿಧ ವೃತ್ತಿಪರ ಕೋರ್ಸುಗಳಿಗೆ ಪ್ರವೇಶ ಪಡೆದುಕೊಳ್ಳಲು ನಡೆದಿದ್ದ ಸಿಇಟಿ ಪರೀಕ್ಷೆಯನ್ನು ಈ ಬಾರಿ ಬಿಗಿ ಭದ್ರತೆ ನಡುವೆ ಕಟ್ಟುನಿಟ್ಟಾಗಿ ನಡೆಸಲಾಗಿತ್ತು.

- Advertisement -

Latest News

error: Content is protected !!