Sunday, June 7, 2026
Homeಕರಾವಳಿಬಂಟ್ವಾಳ: ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಸರ ಕಳ್ಳತನ ಪ್ರಕರಣ: ಆರೋಪಿಯನ್ನು ಬಂಧಿಸಿದ ಪೊಲೀಸರು

ಬಂಟ್ವಾಳ: ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಸರ ಕಳ್ಳತನ ಪ್ರಕರಣ: ಆರೋಪಿಯನ್ನು ಬಂಧಿಸಿದ ಪೊಲೀಸರು

- Advertisement -
- Advertisement -

ಬಂಟ್ವಾಳ: ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಸರ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬೆಳ್ತಂಗಡಿಯ ತಣ್ಣೀರು ಪಂಥ ನಿವಾಸಿ ಇಲ್ಯಾಸ್ (26) ಬಂಧಿತ ಆರೋಪಿ.

ಆರೋಪಿ ಜೂನ್ 15 ರಂದು ಬಂಟ್ವಾಳ ಕಾವಳಪಡೂರು ಗ್ರಾಮದ ಹಂಚಿಕಟ್ಚೆ ಸಾಲುಮರ ತಿಮ್ಮಕ್ಕ ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆ ಕುತ್ತಿಗೆಯಿಂದ ಸರವನ್ನು ಕಿತ್ತು ಪರಾರಿಯಾಗಿದ್ದ. ಆರೋಪಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ಆತನಲ್ಲಿದ್ದ ಚಿನ್ನ ಲೇಪಿತ ಎರಡು ಬೆಳ್ಳಿಯ ಸರಗಳನ್ನು ವಶಕ್ಕೆ ಪಡೆದಿದ್ದಾರೆ. ಸದ್ಯ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

- Advertisement -

Latest News

error: Content is protected !!