Thursday, January 16, 2025
Homeಕರಾವಳಿಉಡುಪಿಮಂಗಳೂರು: ಜೈಲು ಸೇರಿದ್ರೂ ಹಳೆ ಛಾಳಿ ಬಿಡದ ಖದೀಮರು; ಇಬ್ಬರು ಸರಗಳ್ಳರನ್ನು ಮತ್ತೆ ಕಾರಾಗೃಹಕ್ಕಟ್ಟಿದ ಪೊಲೀಸರು

ಮಂಗಳೂರು: ಜೈಲು ಸೇರಿದ್ರೂ ಹಳೆ ಛಾಳಿ ಬಿಡದ ಖದೀಮರು; ಇಬ್ಬರು ಸರಗಳ್ಳರನ್ನು ಮತ್ತೆ ಕಾರಾಗೃಹಕ್ಕಟ್ಟಿದ ಪೊಲೀಸರು

spot_img
- Advertisement -
- Advertisement -

ಮಂಗಳೂರು: ಜೈಲು ಸೇರಿದ್ರೂ ತಮ್ಮ ಹಳೆ ಛಾಳಿ ಬಿಡದೇ ಕಳ್ಳತನದಲ್ಲಿ ನಿರತರಾಗಿದ್ದ ಇಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಕೃಷ್ಣಾಪುರ ಮೂಲದ ಹಬೀಬ್ ಹಸನ್ ಯಾನೆ ಚೊಂಬುಗುಡ್ಡೆ ಹಬೀಬ್ ಯಾನೆ ಅಬ್ಬಿ (43) ಮತ್ತು ಬಂಟ್ವಾಳ ತಾಲೂಕಿನ ಪರ್ಲಿಯಾ ನಿವಾಸಿ ಉಮ್ಮರ್ ಶಿಯಾಫ್ (29 )ಬಂಧಿತರು.

ಆರೋಪಿಗಳು ಮಂಗಳೂರು ಕಮೀಷನರೇಟ್ ವ್ಯಾಪ್ತಿಯಲ್ಲಿ ಹಾಗೂ ಉಡುಪಿ ಜಿಲ್ಲೆಯ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೈಕ್ ನಲ್ಲಿ ಬಂದು ಮಹಿಳೆಯರ ಕುತ್ತಿಗೆಯಿಂದ ಚಿನ್ನದ ಸರವನ್ನು ಸುಲಿಗೆ ಮಾಡಿದ ಪ್ರಕರಣದಲ್ಲಿ ಭಾಗಿಯಾದಲ್ಲಿ ಭಾಗಿಯಾಗಿದ್ರು. ಆರೋಪಿಗಳನ್ನು  ಕೃತ್ಯ ನಡೆದ 24 ಗಂಟೆ ಒಳಗಡೆ ಮಂಗಳೂರು ಸಿಸಿಬಿ ಪೊಲೀಸರು ದಸ್ತಗಿರಿ ಮಾಡಿ ಚಿನ್ನದ ಸರ ಹಾಗೂ ಕಳವುಗೈದ ಬೈಕ್ ಅನ್ನು ವಶಪಡಿಸಿಕೊಂಡಿದ್ದಾರೆ.


ಆರೋಪಿಗಳು ಡಿಸೆಂಬರ್ 6 ರಂದು ನರಿಂಗಾನ ಗ್ರಾಮದ ತೌಡುಗೋಳಿ ಅಂಗನವಾಡಿ ಕೇಂದ್ರದಲ್ಲಿ ಅಡುಗೆ ಸಹಾಯಕರಾಗಿ ಕೆಲಸ ಮಾಡಿಕೊಂಡಿದ್ದ ಸುಜಿನಾ ಡಿಸೊಜಾ ಅವರು ಅಂಗನವಾಡಿಯಲ್ಲಿ ಕೆಲಸದಲ್ಲಿರುವ ಸಮಯ ಮಧ್ಯಾಹ್ನ 1.15 ಗಂಟೆ ಸುಮಾರಿಗೆ ಇಬ್ಬರು ಬೈಕಿನಲ್ಲಿ ಅಂಗನವಾಡಿಗೆ ಬಂದು, ಬೈಕಿನಿಂದ ಇಳಿದು ಮಂಜನಾಡಿಗೆ ಹೋಗುವ ದಾರಿಯ ಬಗ್ಗೆ ವಿಚಾರಿಸಿದ್ದರು. ಸುಜಿನಾ ಅವರು ಮಂಜನಾಡಿಗೆ ಹೋಗುವ ದಾರಿಯನ್ನು ಹೇಳಿ, ಅಂಗನವಾಡಿಯ ಬಾಗಿಲನ್ನು ಹಾಕುವಷ್ಟರಲ್ಲಿ ಬಾಗಿಲನ್ನು ದೂಡಿ ಅಂಗನವಾಡಿಯ ಒಳಗೆ ಪ್ರವೇಶಿಸಿ, ಸುಜಿನಾರವರ ಕುತ್ತಿಗೆಯ ಚಿನ್ನದ ಸರವನ್ನು ಕಿತ್ತುಕೊಂಡು ಬೈಕ್ ನಲ್ಲಿ ಪರಾರಿಯಾಗಿದ್ದರು. ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಬಳಿಕ ಡಿಸೆಂಬರ್ ರಂದು ಉಡುಪಿ ಜಿಲ್ಲೆಯ ಕಾರ್ಕಳ ಗ್ರಾಮಾಂತರ ಠಾಣೆಯ ಬೋಳ ಗ್ರಾಮದ ಸುಂಕಮಾರು- ಮಂಜರಪಲ್ಕೆ ಎಂಬಲ್ಲಿ ಸಾರ್ವಜನಿಕ ರಸ್ತೆಯಲ್ಲಿ ಮನೆಗೆ ನಡೆದು ಹೋಗುತ್ತಿದ್ದ ವಸಂತಿ ಎಂಬವರಲ್ಲಿ ಬೈಕ್ ನಲ್ಲಿ ಬಂದಿದ್ದ ಯುವಕ ಮತ್ತು ಯುವತಿ ಭಾಸ್ಕರ್ ಎಂಬವರ ಮನೆಗೆ ಹೋಗುವ ದಾರಿ ಯಾವುದೆಂದು ಕೇಳಿ ವಸಂತಿಯವರ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಸುಲಿಗೆ ಮಾಡಿ ಪರಾರಿಯಾಗಿದ್ದರು. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಕೊಣಾಜೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಸರಕಳ್ಳತನ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳ ಬಗ್ಗೆ ಮಂಗಳೂರು ಸಿಸಿಬಿ ಪೊಲೀಸರು ಸಿಸಿ ಟಿವಿ ಫೂಟೇಜ್ ಗಳನ್ನು ಸಂಗ್ರಹಿಸಿ ಮಾಹಿತಿ ಸಂಗ್ರಹಿಸುತ್ತಿದ್ದಾಗ, ಈ ಹಿಂದೆ ಹಲವು ಸರಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿ ಸುಮಾರು 4 ದಿನಗಳ ಹಿಂದೆ ಜೈಲ್ ನಿಂದ ಜಾಮೀನಿನಲ್ಲಿ ಬಿಡುಗಡೆಗೊಂಡಿದ್ದ ಹಬೀಬ್ ಹಸನ್ ಹಾಗೂ ಆತನ ಸಹಚರ ಭಾಗಿಯಾಗಿರುವ ಕುರಿತು ಖಚಿತಗೊಂಡಿತ್ತು. ಇದೇ ವೇಳೆ, ಆರೋಪಿ ಮಂಗಳೂರು ನಗರದ ಕಾರ್ ಸ್ಟ್ರೀಟ್ ಬಳಿಯಲ್ಲಿದ್ದಾನೆಂಬ ಮಾಹಿತಿ ಬಂದಂತೆ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.


ಆರೋಪಿಗಳಿಬ್ಬರು ಈ ಹಿಂದೆ 2 ತಿಂಗಳ ಹಿಂದೆ ಮೂಡಬಿದ್ರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2 ಕಡೆ ಮಹಿಳೆಯರ ಕುತ್ತಿಗೆಯಿಂದ ಸರಕಳ್ಳತನ ಮಾಡಿ ದಸ್ತಗಿರಿಯಾಗಿ ಮಂಗಳೂರು ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದರು‌. ಡಿ. 06ರಂದು ಜಾಮೀನಿನಲ್ಲಿ ಬಿಡುಗಡೆಗೊಂಡಿದ್ದು, ಅದೇ ದಿನವೇ ಮಂಗಳೂರು ನಗರದ ಜೈಲ್ ರಸ್ತೆಯ ಪರಿಸರದಲ್ಲಿ ಬೈಕ್ ಕಳ್ಳತನ ಮಾಡಿ ಮರುದಿನ ಆರೋಪಿಗಳಿಬ್ಬರು ಕೊಣಾಜೆ ಠಾಣಾ ವ್ಯಾಪ್ತಿಯ ತೌಡುಗೋಳಿ ಬಳಿ ಮಹಿಳೆಯ ಕುತ್ತಿಗೆಯಿಂದ ಚಿನ್ನದ ಸರವನ್ನು ಸುಲಿಗೆ ಮಾಡಿದ್ದರು. ಅಲ್ಲದೇ 2 ದಿನ ಬಿಟ್ಟು ಮಂಗಳೂರು ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣ ಪರಿಸರದಲ್ಲಿ ನಿಲ್ಲಿಸಿದ್ದ ಇನ್ನೊಂದು ಬೈಕ್ ನ್ನು ಕಳವು ಮಾಡಿ ಅದೇ ಬೈಕ್ ನಲ್ಲಿ ಆರೋಪಿ ಹಬೀಬ್ ಆತನ ಸ್ನೇಹಿತೆ ಮಹಿಳೆಯ ಜೊತೆಗೂಡಿ ಕಾರ್ಕಳದಲ್ಲಿ ಮಹಿಳೆಯೋರ್ವರ ಕುತ್ತಿಗೆಯಿಂದ ಚಿನ್ನದ ಸರವನ್ನು ಕಳ್ಳತನ ಮಾಡಿದ್ದರು.

- Advertisement -
spot_img

Latest News

error: Content is protected !!