Saturday, November 28, 2026
Homeಕರಾವಳಿಉಡುಪಿಕುಂದಾಪುರ; ಕುಂಭಾಶಿ ದೇವಸ್ಥಾನದಲ್ಲಿ ಸರಗಳ್ಳತನ: ತಮಿಳುನಾಡು ಮೂಲದ ಮೂವರು ಮಹಿಳೆಯರ ಬಂಧನ

ಕುಂದಾಪುರ; ಕುಂಭಾಶಿ ದೇವಸ್ಥಾನದಲ್ಲಿ ಸರಗಳ್ಳತನ: ತಮಿಳುನಾಡು ಮೂಲದ ಮೂವರು ಮಹಿಳೆಯರ ಬಂಧನ

- Advertisement -
- Advertisement -

ಕುಂದಾಪುರ: ಗಣೇಶ ಚತುರ್ಥಿಯಂದು ಕುಂಭಾಶಿ ಶ್ರೀ ವಿನಾಯಕ ದೇವಸ್ಥಾನದಲ್ಲಿ ವೃದ್ಧೆಯೊಬ್ಬರ ಚಿನ್ನದ ಸರ ಎಗರಿಸಿದ್ದ ತಮಿಳುನಾಡು ಮೂಲದ ಮೂವರು ಮಹಿಳೆಯರನ್ನು ಕುಂದಾಪುರ ಪೊಲೀಸರು ಬಂಧಿಸಿ, ಕಳವಾಗಿದ್ದ ₹2 ಲಕ್ಷ ಮೌಲ್ಯದ ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ. ತಮಿಳುನಾಡಿನ ವಲ್ಲಿಯಮ್ಮ, ದೇವಿ ಯಾನೆ ತಿಲೋತ್ತಮ ಹಾಗೂ ಪೊನ್ನಿ ಬಂಧಿತ ಆರೋಪಿಗಳು.

ಸೆಪ್ಟೆಂಬರ್ 14ರಂದು ಬೈಂದೂರು ತಾಲ್ಲೂಕಿನ ನಾಡ ಗುಡ್ಡೆಯಂಗಡಿ ನಿವಾಸಿ ಮುತ್ತು (75) ಎಂಬುವವರು ದೇವಸ್ಥಾನದಲ್ಲಿ ಪ್ರದಕ್ಷಿಣೆ ಬರುತ್ತಿದ್ದ ವೇಳೆ ಜನಜಂಗುಳಿಯ ಲಾಭ ಪಡೆದ ಆರೋಪಿಗಳು ಅವರ ಕುತ್ತಿಗೆಯಲ್ಲಿದ್ದ 15.340 ಗ್ರಾಂ ತೂಕದ ಚಿನ್ನದ ಸರವನ್ನು ಸುಲಿಗೆ ಮಾಡಿ ಪರಾರಿಯಾಗಿದ್ದರು. ಈ ಕುರಿತು ಕುಂದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ತನಿಖೆ ನಡೆಸಿದ ಪೊಲೀಸರಿಗೆ ಆರೋಪಿಗಳು ಕೇರಳದ ವಯನಾಡು ಜಿಲ್ಲೆಯ ಮಾನಂತವಾಡಿ ಜೈಲಿನಲ್ಲಿರುವ ಮಾಹಿತಿ ಲಭ್ಯವಾಗಿತ್ತು. ಕುಂದಾಪುರ ಡಿವೈಎಸ್ಪಿ ಮಾರ್ಗದರ್ಶನದಲ್ಲಿ ಪೊಲೀಸ್ ನಿರೀಕ್ಷಕರು ನ್ಯಾಯಾಲಯದ ಅನುಮತಿ ಪಡೆದು ಆರೋಪಿಗಳನ್ನು ಕುಂದಾಪುರಕ್ಕೆ ಕರೆತಂದು ವಿಚಾರಣೆ ನಡೆಸಿದಾಗ ಕಳವು ಕೃತ್ಯ ಬೆಳಕಿಗೆ ಬಂದಿದೆ. ಆರೋಪಿಗಳಿಂದ ₹2 ಲಕ್ಷ ಮೌಲ್ಯದ ಚಿನ್ನದ ಸರವನ್ನು ಜಪ್ತಿ ಮಾಡಲಾಗಿದ್ದು, ಕಾರ್ಯಾಚರಣೆಯಲ್ಲಿ ಕುಂದಾಪುರ ಠಾಣಾ ಪಿಎಸ್ಐ ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು.

- Advertisement -

Latest News

error: Content is protected !!