Friday, June 5, 2026
Homeಕರಾವಳಿಮಂಗಳೂರು:;ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಕುತ್ತಿಗೆಯಿಂದ ಸರ ಎಗರಿಸಿದ ಕಳ್ಳ

ಮಂಗಳೂರು:;ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಕುತ್ತಿಗೆಯಿಂದ ಸರ ಎಗರಿಸಿದ ಕಳ್ಳ

- Advertisement -
- Advertisement -

ಮಂಗಳೂರು: ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಕುತ್ತಿಗೆಯಿಂದ ಬೈಕ್ ನಲ್ಲಿ ಬಂದ ಕಳ್ಳನೊಬ್ಬ ಚಿನ್ನದ ಸರವನ್ನು ಕದ್ದು ಪರಾರಿಯಾಗಿರುವ ಘಟನೆ ಮಂಗಳೂರಿನ ಬರ್ಕೆ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ನಿರ್ಮಲಾ ಎಂಬವರು ಗಾಂಧಿನಗರದ ನರ್ಸಿಂಗ್‌ ಹೋಮ್‌ಗೆ ಹೋಗಿ ಬೆಳಗ್ಗೆ 11.40ರ ಸುಮಾರಿಗೆ ಮಠದ ಕಣಿ ಮುಖ್ಯರಸ್ತೆಯಲ್ಲಿ ಒಬ್ಬರೇ ನಡೆದುಕೊಂಡು ಮನೆ ಕಡೆಗೆ ಬರುತ್ತಿದ್ದಾಗ ಹಿಂದಿನಿಂದ ಬೈಕ್‌ನಲ್ಲಿ ಬಂದ ವ್ಯಕ್ತಿಯೋರ್ವ ಕುತ್ತಿಗೆಗೆ ಕೈ ಹಾಕಿ ಸುಮಾರು 40 ಗ್ರಾಂ ತೂಕದ ಅಂದಾಜು 1.60 ಲ.ರೂ.ಮೌಲ್ಯದ ಚಿನ್ನದ ಸರ ಸುಲಿಗೆ ಮಾಡಿ ಪರಾರಿಯಾಗಿದ್ದಾನೆ. ಬರ್ಕೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!