Friday, June 5, 2026
Homeಕರಾವಳಿಮಂಗಳೂರು; ಬೈಕ್ ನಲ್ಲಿ ಬಂದು ಮಹಿಳೆಯ ಕತ್ತಿನಲ್ಲಿದ್ದ ಸರ ಎಗರಿಸಿದ ದುಷ್ಕರ್ಮಿಗಳು

ಮಂಗಳೂರು; ಬೈಕ್ ನಲ್ಲಿ ಬಂದು ಮಹಿಳೆಯ ಕತ್ತಿನಲ್ಲಿದ್ದ ಸರ ಎಗರಿಸಿದ ದುಷ್ಕರ್ಮಿಗಳು

- Advertisement -
- Advertisement -

ಮಂಗಳೂರು: ಬೈಕ್‌ನಲ್ಲಿ ಬಂದು ಇಬ್ಬರು ದುಷ್ಕರ್ಮಿಗಳು ಮಹಿಳೆಯೊಬ್ಬರ ಕುತ್ತಿಗೆಯಲ್ಲಿದ್ದ ಚಿನ್ನದ ಸರ ದೋಚಿ ಪರಾರಿಯಾಗಿರುವ ಘಟನೆ ಸುರತ್ಕಲ್‌ ಪೊಲೀಸ್‌ ಠಾಣಾ ವ್ಯಾಪ್ತಿಯ ತಡಂಬೈಲ್‌ ಎಂಬಲ್ಲಿ ನಡೆದಿದೆ.

ಪುಷ್ಪಾ (70) ಎಂಬವರು ನಿನ್ನೆ ಬೆಳಗ್ಗೆ ತಡಂಬೈಲ್‌ನ ತನ್ನ ಮನೆಯ ಕಂಪೌಂಡ್‌ ಒಳಭಾಗದಲ್ಲಿದ್ದ ಬಾವಿಯಿಂದ ನೀರು ಸೇದುತ್ತಿದ್ದಾಗ ಬೈಕ್‌ನಲ್ಲಿ ಬಂದ ಇಬ್ಬರು ಅಪರಿಚಿತರು ಅವರ ಕುತ್ತಿಗೆಯಲ್ಲಿದ್ದ ಅಂದಾಜು 1.25 ಲಕ್ಷ ರೂ.

ಬೆಲೆಯ ಚಿನ್ನದ ಸರ ಎಗರಿಸಿ ಪರಾರಿಯಾಗಿದ್ದಾರೆ ಎಂದು ಅವರು ಸುರತ್ಕಲ್‌ ಪೊಲೀಸ್‌ ಠಾಣೆಗೆ ದೂರು ದಾಖಲಿಸಿದ್ದಾರೆ.

ಸುರತ್ಕಲ್‌ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ .

- Advertisement -

Latest News

error: Content is protected !!