Friday, June 5, 2026
Homeಕರಾವಳಿಕಡಬ : ಹಾಡಹಗಲೇ ಪಂಜದಲ್ಲಿ ಮನೆಯೊಳಗೆ ನುಗ್ಗಿ ಮಹಿಳೆಗೆ ಹಲ್ಲೆ ಮಾಡಿ ಚಿನ್ನದ ಸರ ದೋಚಿದ ಕಳ್ಳರು

ಕಡಬ : ಹಾಡಹಗಲೇ ಪಂಜದಲ್ಲಿ ಮನೆಯೊಳಗೆ ನುಗ್ಗಿ ಮಹಿಳೆಗೆ ಹಲ್ಲೆ ಮಾಡಿ ಚಿನ್ನದ ಸರ ದೋಚಿದ ಕಳ್ಳರು

- Advertisement -
- Advertisement -

ಕಡಬ : ಹಾಡಹಗಲೇ ಮನೆಯೊಳಗೆ ನುಗ್ಗಿ ಮಹಿಳೆಗೆ ಹಲ್ಲೆ ಮಾಡಿ ಕಳ್ಳರು ಚಿನ್ನದ ಸರ ದೋಚಿದ ಘಟನೆ ಪಂಜದ ಡಬಲ್ ಕಟ್ಟೆಯಲ್ಲಿ ನಡೆದಿದೆ.

ಪಂಜ ಸಮೀಪದ ಪಂಬೆತ್ತಾಡಿ ಗ್ರಾಮದ ಡಬಲ್ ಕಟ್ಟೆ ಸೀತಮ್ಮ ಎಂಬವರು ಮನೆಗೆ ಬಾಗಿಲು ಹಾಕಿ ಪಕ್ಕದ ಮನೆಗೆ ಹೋಗಿದ್ದರು. ಇದೇ ವೇಳೆ ಮನೆಯೊಳಗೆ ಸದ್ದು ಕೇಳಿತ್ತೆಂದು ಮನೆಗೆ ಬಂದಾಗ ಇಬ್ಬರು ಕಳ್ಳರು ಮನೆಯೊಳಗೆ ಹಿಂದಿನ ಬಾಗಿಲಿನಿಂದ ನುಗ್ಗಿದ್ದು ಗೊತ್ತಾಗಿದೆ. ಇದೇ ವೇಳೆ ದುಷ್ಕರ್ಮಿಗಳು ಮಹಿಳೆ ಮೇಲೆ ಹಲ್ಲೆ ನಡೆಸಿ ಜೀವ ಬೆದರಿಕೆ ಒಡ್ಡಿ ಕುತ್ತಿಗೆಯಲ್ಲಿದ್ದ ಚಿನ್ನದ ಸರ ಕಸಿದು ಪರಾರಿಯಾಗಿದ್ದಾರೆ. ಇಬ್ಬರು ಕಳ್ಳರು ಬೈಕಿನಲ್ಲಿ ಬಂದಿರುವ ಶಂಕೆ ವ್ಯಕ್ತವಾಗಿದ್ದು ಸುಬ್ರಹ್ಮಣ್ಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿ ತನಿಖೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!