Thursday, June 4, 2026
Homeತಾಜಾ ಸುದ್ದಿಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ ಸೇರಿ ನಾಲ್ವರು ಅರೆಸ್ಟ್

ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ ಸೇರಿ ನಾಲ್ವರು ಅರೆಸ್ಟ್

- Advertisement -
- Advertisement -

ಉಡುಪಿ; ಹಿಂದೂ ಕಾರ್ಯಕರ್ತೆ ಚೈತ್ರಾ ಕುಂದಾಪುರ ಸೇರಿ ನಾಲ್ವರನ್ನು ಅರೆಸ್ಟ್ ಮಾಡಲಾಗಿದೆ.ಉಡುಪಿ ಕೃಷ್ಣ ಮಠದ ಪಾರ್ಕಿಂಗ್ ಪ್ರದೇಶದಲ್ಲಿ ಶ್ರೀಕಾಂತ್ ನಾಯಕ್ ಪೆಲತ್ತೂರು ಮತ್ತು ಚೈತ್ರ ಕುಂದಾಪುರ ಇಬ್ಬರನ್ನು ಬೆಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬೈಂದೂರು ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಬೈಂದೂರಿನ ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರಿಗೆ ಸುಮಾರು ಏಳು ಕೋಟಿ ರೂಪಾಯಿ ಚೈತ್ರಾ ಕುಂದಾಪುರ ವಂಚಿಸಿದ್ದಾರೆ ಎಂದು ಗೋವಿಂದ ಬಾಬು ಪೂಜಾರಿ ದೂರು ನೀಡಿದ್ದರು.ಅದರಂತೆ ತನಿಖೆ ನಡೆಸಿದ ಪೊಲೀಸರು ಚೈತ್ರಾ ಕುಂದಾಪುರ ಬಂಧನಕ್ಕೆ ಬಲೆ ಬೀಸಿದ್ದರು.ಆದರೆ ಆಕೆ ತಲೆಮರೆಸಿಕೊಂಡಿದ್ದರು. ನಿನ್ನೆ ಅವರನ್ನು ಬಂಧಿಸಲಾಗಿದೆ.

ಇನ್ನು ಟಿಕೆಟ್ ಕೊಡಿಸುವುದಾಗಿ ಚೈತ್ರಾ ಹಾಗೂ  ನಾಲ್ಕೈದು ಜನರ ವಂಚನೆ ಮಾಡಿದ್ದು, ಕೇಂದ್ರೀಯ ಬಿಜೆಪಿ  ನಾಯಕರು, ಆರ್ ಎಸ್ ಎಸ್ ಪ್ರಮುಖರ ಹೆಸರಿನಲ್ಲಿ‌ ವಂಚಿಸಲಾಗಿದೆ ಎನ್ನಲಾಗಿದೆ.

ಇನ್ನು ಚೈತ್ರಾ ಕುಂದಾಪುರ, ಶ್ರೀಕಾಂತ ನಾಯಕ್ ಒಟ್ಟು ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -

Latest News

error: Content is protected !!