Thursday, June 4, 2026
Homeಕರಾವಳಿಉಡುಪಿಎಂಎಲ್ ಎ ಟಿಕೆಟ್ ಗಾಗಿ 5 ಕೋಟಿ ರೂಪಾಯಿ ವಂಚನೆ ಪ್ರಕರಣ; ಆರೋಪಿ ಚೈತ್ರಾ ಕುಂದಾಪುರಗೆ...

ಎಂಎಲ್ ಎ ಟಿಕೆಟ್ ಗಾಗಿ 5 ಕೋಟಿ ರೂಪಾಯಿ ವಂಚನೆ ಪ್ರಕರಣ; ಆರೋಪಿ ಚೈತ್ರಾ ಕುಂದಾಪುರಗೆ ಜಾಮೀನು

- Advertisement -
- Advertisement -

ಬೆಂಗಳೂರು; ಎಂಎಲ್ ಎ ಟಿಕೆಟ್ ಗಾಗಿ 5 ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ  ಸಂಬಂಧಿಸಿದಂತೆ ಆರೋಪಿ ಚೈತ್ರಾ ಕುಂದಾಪುರಗೆ ಜಾಮೀನು ದೊರೆತಿದೆ.ಪ್ರಮುಖ ಆರೋಪಿ ಚೈತ್ರಾ ಸೇರಿ ಇಬ್ಬರಿಗೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.ವಂಚನೆ ಪ್ರಕರಣದ ಪ್ರಮುಖ ಆರೋಪಿ ಚೈತ್ರಾ ಹಾಗೂ ಎ2 ಆರೋಪಿಯಾಗಿರುವ ಶ್ರೀಕಾಂತ್‍ಗೆ 3ನೇ ಎಸಿಎಂಎಂ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ. ಇಂದು ಪರಪ್ಪನ ಅಗ್ರಹಾರ ಕಾರಾಗೃಹದಿಂದ ಈ ಇಬ್ಬರು ಬಿಡುಗಡೆಯಾಗಿದ್ದಾರೆ. ಈ ಮೊದಲು ಹಾಲಶ್ರೀ ಸ್ವಾಮೀಜಿಗೆ ಜಾಮೀನು ನೀಡಲಾಗಿತ್ತು. ಇದೀಗ ಪ್ರಕರಣದಲ್ಲಿ ಮೂವರಿಗೆ ಜಾಮೀನು ಸಿಕ್ಕಿದಂತಾಗಿದೆ.ಪ್ರಕರಣಕ್ಕೆ ಸಂಬಂಘಧಪಟ್ಟಂತೆ ಗಗನ್ ಕಡೂರು, ಹಾಲಶ್ರೀ ಸ್ವಾಮೀಜಿ, ಧನರಾಜ್, ಚನ್ನನಾಯ್ಕ್, ಪ್ರಜ್ವಲ್, ಶ್ರೀಕಾಂತ್ ಸೇರಿದಂತೆ 9 ಮಂದಿಯನ್ನು ಬಂಧಿಸಲಾಗಿತ್ತು. ತನಿಖೆ ಪೂರ್ಣಗೊಳಿಸಿ ಇತ್ತೀಚೆಗೆ ಈ 9 ಮಂದಿ ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ಸಿಸಿಬಿ ದೋಷಾರೋಪ ಪಟ್ಟಿ ಸಲ್ಲಿಸಿತ್ತು.ಇದೀಗ ಪ್ರಕರಣದ ಮೂವರು ಆರೋಪಿಗಳಿಗೆ ಜಾಮೀನು ದೊರೆತಿದೆ.

 

- Advertisement -

Latest News

error: Content is protected !!