Thursday, January 16, 2025
Homeಅಪರಾಧಬಿಗ್ ಬಾಸ್ ಶೋ ನಿಂದ ಹೊರಬಂದ ಚೈತ್ರಾ ಕುಂದಾಪುರ; ವಂಚನೆ ಕೇಸ್ ಹಿನ್ನೆಲೆ ಕೋರ್ಟ್‌ಗೆ ಹಾಜರು

ಬಿಗ್ ಬಾಸ್ ಶೋ ನಿಂದ ಹೊರಬಂದ ಚೈತ್ರಾ ಕುಂದಾಪುರ; ವಂಚನೆ ಕೇಸ್ ಹಿನ್ನೆಲೆ ಕೋರ್ಟ್‌ಗೆ ಹಾಜರು

spot_img
- Advertisement -
- Advertisement -

ಕನ್ನಡದ ಖಾಸಗಿ ವಾಹಿನಿಯ ಮೂಲಕ ಪ್ರಸಾರವಾಗುತ್ತಿರುವ ಪ್ರಸಿದ್ಧ ರಿಯಾಲಿಟಿ ಶೋ ‘ಬಿಗ್ ಬಾಸ್ ಕನ್ನಡ 11’ರಿಂದ ಚೈತ್ರಾ ಕುಂದಾಪುರ ಹೊರಬಂದಿದ್ದಾರೆ ಎನ್ನವ ಸುದ್ದಿ ಎಲ್ಲೆಡೆ ಹರಿದಾಡುತ್ತಿದೆ.

ಚೈತ್ರಾ ಕುಂದಾಪುರ ಡಿ.3 ಮಂಗಳವಾರದಂದು ವಂಚನೆ ಕೇಸ್ ಹಿನ್ನೆಲೆಯಲ್ಲಿ ಎಸಿಎಂಎಂ ಕೋರ್ಟ್ ಮುಂದೆ ಚೈತ್ರಾ ಹಾಜರಾಗಿದ್ದಾರೆ ಎನ್ನಲಾಗಿದೆ.

ಉದ್ಯಮಿ ಗೋವಿಂದ ಪೂಜಾರಿಗೆ ಎಂಎಲ್‌ಎ ಟಿಕೆಟ್ ಕೊಡಿಸೋದಾಗಿ ಚೈತ್ರಾ & ಟೀಮ್ 5 ಕೋಟಿ ರೂ. ವಂಚಿಸಿದ್ದು, ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಚೈತ್ರಾ ಬಿಗ್ ಬಾಸ್‌ನಿಂದ ಹೊರಬಂದು ಎಸಿಎಂಎಂ ನ್ಯಾಯಾಲಯದ ಮುಂದೆ ಅಟೆಂಡ್ ಆಗಿದ್ದಾರೆ. ಚೈತ್ರಾ, ಶ್ರೀಕಾಂತ್ ಸೇರಿದಂತೆ ಮೂವರು ಕೋಟ್‌ಗೆ ಬಂದಿದ್ದಾರೆ. ನ್ಯಾಯಾಧೀಶರು ವಾದ ಪ್ರತಿವಾದವನ್ನು ಆಲಿಸಿದ ನಂತರ 2025ರ ಜ.13ಕ್ಕೆ ಮುಂದಿನ ವಿಚಾರಣೆಗೆ ದಿನಾಂಕ ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.

ಹಿಂದಿನ ಶೋ ನಲ್ಲಿ ಹುಲಿ ಉಗುರು ಧರಿಸಿದ್ದ ಆರೋಪದಲ್ಲಿ ವರ್ತೂರು ಸಂತೋಷ್ ಅವರು ಒಂದು ವಾರಗಳ ಕಾಲ ಜೈಲು ವಾಸ ಅನುಭವಿಸಿದ್ದರು. ನಂತರ ಮತ್ತೆ ಬಿಗ್ ಬಾಸ್ ನಲ್ಲಿ ಕಾಣಿಸಿಕೊಂಡಿದ್ದರು. ಇದೀಗ ಮತ್ತೆ ಚೈತ್ರಾ ಕುಂದಾಪುರ ಬಿಗ್ ಬಾಸ್ ಶೋಗೆ ಬರುತ್ತಾರಾ ಎಂದು ಕಾದುನೋಡಬೇಕಿದೆ.  

- Advertisement -
spot_img

Latest News

error: Content is protected !!