ಉಡುಪಿ; ಕುಡುಕ ತಂದೆಯ ಚಿತ್ರ ಹಿಂಸೆ ಅನುಭವಿಸಿದವರಿಗಷ್ಟೇ ಗೊತ್ತು ಎಂದು ತಂದೆ ಆರೋಪಕ್ಕೆ ಚೈತ್ರಾ ಕುಂದಾಪುರು ತಿರುಗೇಟು ಕೊಟ್ಟಿದ್ದಾರೆ.
ಆಕೆ ನನ್ನನ್ನು ಮದುವೆಗೆ ಕರೆದಿಲ್ಲ. ನಾನು ಮದುವೆಗೆ ಹೋಗಿಲ್ಲ. ಈ ಮದುವೆಯನ್ನು ನಾನು ಒಪ್ಪಲಾರೆ. ಚೈತ್ರಾ ಮತ್ತು ಆಕೆಯ ಪತಿ ಇಬ್ಬರೂ ಕಳ್ಳರು. ನನ್ನ ಪತ್ನಿ ಕೂಡ ಚೈತ್ರಾ ಬೆಂಬಲಕ್ಕೆ ನಿಂತಿದ್ದಾಳೆ ಅಂತ ಆಕ್ರೋಶ ಹೊರ ಹಾಕಿದ್ದರು. ಈ ಬೆನ್ನಲ್ಲೇ ಚೈತ್ರಾ ಕುಂದಾಪುರ ಅವರು ತಮ್ಮ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ತಂದೆ ಬಗ್ಗೆಯೇ ಸಾಲು ಸಾಲು ಸ್ಟೇಟಸ್ ಹಾಕಿಕೊಂಡಿದ್ದಾರೆ.

ಕುಡುಕ ತಂದೆಯ ಚಿತ್ರ ಹಿಂಸೆ ಅನುಭವಿಸಿದವರಿಗಷ್ಟೇ ಗೊತ್ತು. ಎಂತಹ ಮಕ್ಕಳಿಗೂ ಕುಡುಕ ತಂದೆ ಸಿಗಬಾರದು. ಎರಡು ಕ್ವಾಟರ್ ನಾನು ಕೊಟ್ರೆ ನನ್ನ ಮಕ್ಕಳು ದೇವರು ಅನ್ನುವವರ ಮಾತಿಗೆ ಬೆಲೆ ಕೊಡುವವರು ಮೂರ್ಖರಾಗ್ತಾರೆ.. ಅಂತ ಬರೆದುಕೊಂಡಿದ್ದಾರೆ.
ಇನ್ನೊಂದು ಸ್ಟೇಟಸ್ ಹಾಕಿಕೊಂಡಿರುವ ಅವರು ಹೆತ್ತ ಮಕ್ಕಳನ್ನು ಸಾಕಲಿಲ್ಲ. ಫೀಸು ಕಟ್ಟಿ ಸಾಕಲಿಲ್ಲ. ಹೆಣ್ಣು ಮಕ್ಕಳ ಜವಾಬ್ದರಿ ಹೊತ್ತು ಮದುವೆಯೂ ಮಾಡಲಿಲ್ಲ. ಕಟ್ಟಿಕೊಂಡ ಹೆಂಡತಿಗೆ ಹೊಡೆದು ಚಿತ್ರೆ ಹಿಂಸೆ ಮಾಡಿದ್ದು ಬಿಟ್ರೆ ಬೇರೆ ಏನೂ ಇಲ್ಲ. ಎಲ್ಲಾ ಮುಗಿದ ಮೇಲೆ ಅಪವಾದ ಹಾಕೋಕೆ ಮಾತ್ರ ತಂದೆ ಎನ್ನುವ ಹೆಸರು ವಾವ್ ಎಂದು ಬರೆದುಕೊಂಡಿದ್ದಾರೆ.