ಬೆಂಗಳೂರು; ಕೋಟಿ ಡೀಲ್ ಪ್ರಕರಣದಲ್ಲಿ ಅರೆಸ್ಟ್ ಆಗಿ ಸಿಸಿಬಿ ವಶದಲ್ಲಿರುವ ಚೈತ್ರಾ ಕುಂದಾಪುರಳನ್ನು ಇಂದು ವಿಚಾರಣೆಗಾಗಿ ಮಹಿಳಾ ಸಾಂತ್ವವ ಕೇಂದ್ರದಿಂದ ಸಿಸಿಬಿ ಕಚೇರಿಗೆ ಕರೆ ತರಲಾಗಿತ್ತು. ಈ ವೇಳೆ ಚೈತ್ರಾ ಕುಂದಾಪುರ ಮಾಧ್ಯಮ ಪ್ರತಿನಿಧಿಗಳನ್ನು ನೋಡುತ್ತಿದ್ದಂತೆ ಸ್ಫೋಟಕ ಹೇಳಿಕೆ ನೀಡಿದ್ದಾಳೆ.
ಪೊಲೀಸ್ ಜೀಪಿನಲ್ಲಿ ಇಂದು ಸಿಸಿಬಿ ಪೊಲೀಸರು ಕರೆತಂದಾಗ ಜೀಪಿನಿಂದ ಇಳಿಯುತ್ತಲೇ ಮಾಧ್ಯಮ ಪ್ರತಿನಿಧಿಗಳನ್ನು ಕಂಡಾಗ ಈ ಸ್ಫೋಟಕ ಹೇಳಿಕೆ ನೀಡಿದ್ದಾಳೆ.
ಮೊದಲು ಈ ಪ್ರಕರಣದಲ್ಲಿ ಸ್ವಾಮೀಜಿಗಳು ಸಿಕ್ಕಿ ಹಾಕಿಕೊಳ್ಳಲಿ. ಎಲ್ಲಾ ಸತ್ಯ ಗೊತ್ತಾಗುತ್ತೆ ಸರ್. ಸ್ವಾಮೀಜಿ ಸಿಕ್ಕಿ ಹಾಕಿಕೊಂಡ ನಂತರ ದೊಡ್ಡ ದೊಡ್ಡವರ ಹೆಸರುಗಳು ಹೊರ ಬರುತ್ತವೆ. ಇಂದಿರಾ ಕ್ಯಾಂಟಿನ್ ಬಿಲ್ ವಿಚಾರವಾಗಿ ಈ ರೀತಿ ಷಡ್ಯಂತ್ರ ಮಾಡಿ ನನ್ನನ್ನು ಸಿಲುಕಿಸಿದ್ದಾರೆ ಎಂದು ಆಕೆ ಆರೋಪಿಸಿದ್ದಾಳೆ. ಎ ಒನ್ ಆರೋಪಿಯಾಗಿರಲಿ ನಾನು, ಆದರೂ ಮುಂದೆ ಸತ್ಯ ಹೊರ ಬರಲಿದೆ ಎಂದು ಹೇಳಿಕೊಂಡಿದ್ದಾಳೆ. ಈ ಮೂಲಕ ಸ್ವಾಮಿಜಿ ಅಭಿನವ ಹಾಲಾಶ್ರಿ ಬಂಧನದ ಬಳಿಕ ಪ್ರಕರಣದಲ್ಲಿ ಮತ್ತಷ್ಟು ವಿಚಾರಗಳು ಹೊರ ಬರಲಿವೆ ಎಂಬ ಸೂಚನೆ ನೀಡಿದ್ದಾಳೆ . ಇದಕ್ಕೆ ಪ್ರತಿಕ್ರಿಯಿಸಿರುವ ಗೋವಿಂದ ಬಾಬು ಅವರು ಈ ಪ್ರಕರಣಕ್ಕೂ ಇಂದಿರಾ ಕ್ಯಾಂಟಿನ್ ಬಿಲ್ ವಿಚಾರಕ್ಕೂ ಸಂಬಂಧವಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.