- Advertisement -
![]()
- Advertisement -
ಬೆಂಗಳೂರು: ವಿಧಾನ ಪರಿಷತ್ ವಿಪಕ್ಷ ನಾಯಕರಾಗಿ ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ನೇಮಕಗೊಂಡಿದ್ದಾರೆ.
ವಿಧಾನ ಪರಿಷತ್ ವಿಪಕ್ಷ ನಾಯಕರಾಗಿದ್ದ ಕೋಟ ಶ್ರೀನಿವಾಸ ಪೂಜಾರಿ ಲೋಕಸಭಾ ಸದಸ್ಯರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ತೆರವಾದ ಸ್ಥಾನಕ್ಕೆ ಛಲವಾದಿ ನಾರಾಯಣಸ್ವಾಮಿ ಅವರನ್ನು ನೇಮಕ ಮಾಡಲಾಗಿದೆ.
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಆದೇಶದ ಮೇರೆಗೆ ನಾರಾಯಣಸ್ವಾಮಿ ನೇಮಕ ಮಾಡಲಾಗಿದ್ದು, ಮೊದಲ ಬಾರಿಗೆ ವಿಧಾನ ಪರಿಷತ್ ಸದಸ್ಯರಾಗಿರುವ ನಾರಾಯಣಸ್ವಾಮಿ ಅವರಿಗೆ ವಿಪಕ್ಷ ನಾಯಕ ಸ್ಥಾನ ಒಲಿದು ಬಂದಿದೆ.
ಪರಿಶಿಷ್ಟ ಜಾತಿಗೆ ಅವಕಾಶ ನೀಡಬೇಕು ಎಂದು ಬಿಜೆಪಿ ಹೈಕಮಾಂಡ್ ತೀರ್ಮಾನ ತೆಗೆದುಕೊಂಡ ಹಿನ್ನೆಲೆಯಲ್ಲಿ ಈ ನೇಮಕಾತಿ ನಡೆದಿದೆ. ವಿಧಾನ ಪರಿಷತ್ ಸದಸ್ಯರಾದ ಎನ್. ರವಿಕುಮಾರ್ ಮತ್ತು ಸಿ.ಟಿ. ರವಿ ಹೆಸರು ವಿಪಕ್ಷ ನಾಯಕ ಸ್ಥಾನಕ್ಕೆ ಚಾಲ್ತಿಯಲ್ಲಿತ್ತು.
- Advertisement -


