Wednesday, June 24, 2026
Homeಕರಾವಳಿಚಾಲಿಪೋಲಿಲು ಸಿನಿಮಾದ ನಟ ಸುರೇಂದ್ರ ಬರ್ಬರ ಹತ್ಯೆ: ಫ್ಲ್ಯಾಟ್ ನಲ್ಲೇ ಕೊಲೆಗೈದ ದುಷ್ಕರ್ಮಿಗಳು

ಚಾಲಿಪೋಲಿಲು ಸಿನಿಮಾದ ನಟ ಸುರೇಂದ್ರ ಬರ್ಬರ ಹತ್ಯೆ: ಫ್ಲ್ಯಾಟ್ ನಲ್ಲೇ ಕೊಲೆಗೈದ ದುಷ್ಕರ್ಮಿಗಳು

- Advertisement -
- Advertisement -

ಬಂಟ್ವಾಳ: ಹಿಂದೂ ಸಂಘಟನೆಗಳಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿದ್ದ ನಂತರ ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದ ಬಂಟ್ವಾಳ ನಿವಾಸಿ, ಚಲನಚಿತ್ರ ನಟ ಹಾಗೂ ಲೋಕಲ್‌ ರೌಡಿಯಾಗಿದ್ದ ರೌಡಿ ಶೀಟರ್ ಸುರೇಂದ್ರ ಬಂಟ್ವಾಳ ಅವರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಇಂದು ಮಧ್ಯಾಹ್ನ ಬೆಳಕಿಗೆ ಬಂದಿದೆ. ಸುರೇಂದ್ರ ಬಂಟ್ವಾಳ್ ಬಿಸಿರೋಡ್ ನಲ್ಲಿರುವ ತನ್ನ ಫ್ಲ್ಯಾಟ್ ನಲ್ಲಿ ವಾಸವಿದ್ದು ಇಂದು ಮಧ್ಯಾಹ್ನ ಸುಮಾರಿಗೆ ಪ್ರಕರಣ ಬೆಳಕಿಗೆ ಬಂದಿದೆ.

ರೌಡಿಶೀಟರ್ ಆಗಿದ್ದ ಸುರೇಂದ್ರನನ್ನು, ಬಂಟ್ವಾಳದ ಬಸ್ತಿಪಡ್ಪುವಿನ ಅಪಾರ್ಟ್ಮೆಂಟ್​​ನಲ್ಲಿ​​ ಕೊಲೆ ಮಾಡಲಾಗಿದೆ. ನಿನ್ನೆ ರಾತ್ರಿ ದುಷ್ಕರ್ಮಿಗಳು ಮನೆಗೆ ನುಗ್ಗಿ ಕೊಲೆಗೈದು ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ. ಇಂದು ಬೆಳಗ್ಗೆ ಎಷ್ಟು ಹೊತ್ತಾದ್ರೂ ಸುರೇಂದ್ರ ಮನೆ ಬಾಗಿಲು ತೆರೆಯದ ಹಿನ್ನೆಲೆ ಪರಿಶೀಲಿಸಿದಾಗ, ಚಾಕು ಇರಿದು ಕೊಲೆಗೈದಿರುವ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.

ಸುರೇಂದ್ರ ಬಂಟ್ವಾಳ್ ಜೊತೆಗಿದ್ದವರೇ ಕೃತ್ಯದಲ್ಲಿ ಶಾಮೀಲಾಗಿರುವ ಶಂಕೆ ವ್ಯಕ್ತವಾಗಿದೆ. ನಿನ್ನೆ ರಾತ್ರಿ ಗೆಳೆಯ ಸತೀಶ್ ಕುಲಾಲ್ ಮತ್ತು ಇನ್ನೊಬ್ಬ ಪ್ಲಾಟ್ ಗೆ ಅಗಮಿಸಿ ಕೆಲ ಹೊತ್ತಿನ ಬಳಿಕ ವಾಪಸ್ ಹೋಗಿರುವುದು ಪೊಲೀಸ್ ತನಿಖೆಯಲ್ಲಿ ತಿಳಿದು ಬಂದಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆಯನ್ನು ನಡೆಸುತ್ತಿದ್ದಾರೆ.

ಕನ್ನಡ ಚಿತ್ರ ಸವರ್ಣದೀರ್ಘ ಸಂಧಿ ಸೇರಿದಂತೆ ಹಲವು ತುಳು ಚಿತ್ರಗಳಲ್ಲಿ ನಟಿಸಿದ್ದ ಸುರೇಂದ್ರ ಬಂಟ್ವಾಳ್ ಕಳೆದ 2018ರ ಜೂನ್‌ನಲ್ಲಿ ಪ್ರಕರಣವೊಂದರಲ್ಲಿ ಜೈಲು ಸೇರಿದ್ದರು. ಬಂಟ್ವಾಳ ಪೇಟೆಯಲ್ಲಿ ತಲವಾರು ಹಿಡಿದು ಬಿಜೆಪಿ ಕಾರ್ಯಕರ್ತರಿಗೆ ಬಂಟ್ವಾಳ್ ಬೆದರಿಕೆ ಹಾಕಿದ್ದ ವಿಡಿಯೋ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿತ್ತು. ಈ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಜಾಮೀನಿನ ‌ಮೇಲೆ ಸುರೇಂದ್ರ ಹೊರಬಂದಿದ್ದರು.

- Advertisement -

Latest News

error: Content is protected !!