Tuesday, July 2, 2024
Homeಪ್ರಮುಖ-ಸುದ್ದಿರ್ಯಾಂಪರ್ ಚಂದನ್ ಶೆಟ್ಟಿ- ನಿವೇದಿತಾ ಗೌಡ ಸಂಸಾರದಲ್ಲಿ ಬಿರುಕು; ಡಿವೋರ್ಸ್ ಗೆ ಅರ್ಜಿ ಸಲ್ಲಿಸಿದ ಜೋಡಿ

ರ್ಯಾಂಪರ್ ಚಂದನ್ ಶೆಟ್ಟಿ- ನಿವೇದಿತಾ ಗೌಡ ಸಂಸಾರದಲ್ಲಿ ಬಿರುಕು; ಡಿವೋರ್ಸ್ ಗೆ ಅರ್ಜಿ ಸಲ್ಲಿಸಿದ ಜೋಡಿ

spot_img
- Advertisement -
- Advertisement -

ಬೆಂಗಳೂರು; ರ್ಯಾಂಪರ್ ಚಂದನ್ ಶೆಟ್ಟಿ -ನಿವೇದಿತಾ ಗೌಡ ಸಂಸಾರದಲ್ಲಿ ಬಿರುಕು ಮೂಡಿದ್ದು ಜೋಡಿ ಡಿವೋರ್ಸ್ ಗಾಗಿ ಅರ್ಜಿ ಸಲ್ಲಿಸಿದೆ.ಬೆಂಗಳೂರಿನಲ್ಲಿ ಕೌಟುಂಬಿಕ ನ್ಯಾಯಾಲಯದಲ್ಲಿ ಡಿವೋರ್ಸ್ ಗಾಗಿ ಅರ್ಜಿ ಸಲ್ಲಿಸಿದ್ದಾರೆ.ಜೂನ್ 6ರಂದು ಬೆಂಗಳೂರಿನ ಶಾಂತಿನಗರದಲ್ಲಿರುವ ಕೌಟುಂಬಿಕ ಕೋರ್ಟ್ ನಲ್ಲಿ ಇಬ್ಬರೂ ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ.

ಕನ್ನಡದ ಬಿಗ್ ಬಾಸ್ ಸೀಸನ್-5ರಲ್ಲಿ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಜೊತೆಯಾಗಿ ಕಾಣಿಸಿಕೊಂಡಿದ್ದರು. ಇಲ್ಲೇ ಇಬ್ಬರ ಮಧ್ಯೆ ಪ್ರೀತಿ ಮೂಡಿತ್ತು.  ಬಿಗ್ ಬಾಸ್ ನಂತ್ರ ಮೈಸೂರಿನ ಯುವ ದಸರಾ ಕಾರ್ಯಕ್ರಮದ ವೇದಿಕೆಯಲ್ಲೇ ಚಂದನ್ ಶೆಟ್ಟಿ, ನಿವೇದಿತಾಗೆ ಪ್ರಪೋಸ್ ಮಾಡಿದ್ದು ಭಾರೀ ವಿವಾದಕ್ಕೆ ಕಾರಣವಾಗಿತ್ತು.

ಈ ಬಳಿಕ ಚಂದನ್ ಶೆಟ್ಟಿ-ನಿವೇದಿತಾ 2020 ರಲ್ಲಿ ಮೈಸೂರಿನಲ್ಲಿ ಅದ್ಧೂರಿಯಾಗಿ ವಿವಾಹವಾಗಿದ್ದರು. ಈ ಮೂಲಕ ದಾಂಪತ್ಯಕ್ಕೆ ಕಾಲಿಟ್ಟಿದ್ದರು. ಅಲ್ಲದೇ ಕ್ಯಾಂಡಿ ಕ್ರಶ್ ಸಿನಿಮಾದಲ್ಲಿ ಜೊತೆಯಾಗಿ ಕಾಣಿಸಿಕೊಂಡಿದ್ದರು. ಈಗ ನಾಲ್ಕೇ ವರ್ಷದಲ್ಲಿ ದಾಂಪತ್ಯದಲ್ಲಿ ಬಿರುಕು ಮೂಡಿ ವಿಚ್ಚೇದನಕ್ಕಾಗಿ ಇಬ್ಬರು ಅರ್ಜಿ ಸಲ್ಲಿಸಿದ್ದಾರೆ.

- Advertisement -
spot_img

Latest News

error: Content is protected !!