- Advertisement -
![]()
- Advertisement -
ಬೆಂಗಳೂರು ತಮ್ಮ ಡೈವೋರ್ಸ್ ನ್ನು ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಸಾಮಾಜಿಕ ಜಾಲತಾಣದ ಮೂಲಕ ಖಚಿತಪಡಿಸಿದ್ದಾರೆ.

ಈ ಬಗ್ಗೆ ಪೋಸ್ಟ್ ಹಾಕಿರುವ ಅವರು ಈ ದಿನ, ಚಂದನ್ ಶೆಟ್ಟಿ ಮತ್ತು ನಾನು, ನಮ್ಮ ದಾಂಪತ್ಯ ಜೀವನವನ್ನು ಕಾನೂನುಬದ್ಧವಾಗಿ ಪರಸ್ಪರ ಒಪ್ಪಿಗೆಯಿಂದ ಕೊನೆಗೊಳಿಸಿದ್ದೇವೆ. ನಮ್ಮ ನಿರ್ಧಾರವನ್ನು ಮತ್ತು ನಮ್ಮ ಜೀವನದ ಖಾಸಗಿತನವನ್ನ ಗೌರವಿಸಲು ಕೋರುತ್ತೇವೆ. ಪ್ರತಿ ಸಂದರ್ಭದಲ್ಲೂ ನಮ್ಮೊಂದಿಗೆ ನಿಂತ ಮಾಧ್ಯಮ ಮಿತ್ರರು, ನಮ್ಮ ಸ್ನೇಹಿತರು ಮತ್ತು ಅಭಿಮಾನಿಗಳಿಂದ ನಾವು ಎಂದಿನಂತೆ ಬೆಂಬಲವನ್ನು ಕೋರುತ್ತೇವೆ. ನಾವು ನಮ್ಮ ಪ್ರತ್ಯೇಕ ಮಾರ್ಗ ಅನುಸರಿಸಿದರೂ,ಪರಸ್ಪರ ಒಬ್ಬರನೊಬ್ಬರು ಗೌರವಿಸುತ್ತೇವೆ.ಸೂಕ್ಷ್ಮ ಪರಿಗಣನೆಗಾಗಿ ಎಲ್ಲರಿಗೂ ಧನ್ಯವಾದಗಳು ಹೀಗೆ ಇಬ್ಬರು ಒಂದೇ ರೀತಿ ಪೋಸ್ಟ್ ಹಾಕುವ ಮೂಲಕ ಪರಸ್ಪರ ದೂರವಾಗಿರುವ ಸುದ್ದಿಯನ್ನು ಖಚಿತಪಡಿಸಿದ್ದಾರೆ.

- Advertisement -


