- Advertisement -
![]()
- Advertisement -
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಬೆಳ್ತಂಗಡಿ ತಾಲೂಕಿನ ಸಮಸ್ತ ಭಕ್ತರಿಂದ ಸೆ.28 ರಂದು ಭಾನುವಾರ ಚಂಡಿಕಾ ಹೋಮ ನಡೆಯಿತು.
ಬೆಳಗ್ಗೆ 6 ಗಂಟೆಯಿಂದ ಅಮೃತವರ್ಷಿಣಿ ಸಭಾಭವನದಲ್ಲಿ ಚಂಡಿಕಾ ಹೋಮ ಆರಂಭಗೊಂಡು ಸಾವಿರಾರು ಭಕ್ತರು ಭಾಗವಹಿಸಿದರು. ಬಳಿಕ ಬೆಳಗ್ಗೆ 9:30ಕ್ಕೆ ಶ್ರೀ ಧರ್ಮಸ್ಥಳದ ದ್ವಾರದಿಂದ ಯಾಗ ಮಂಟಪಕ್ಕೆ ಬೃಹತ್ ಮೆರವಣಿಗೆ ನಡೆಯಿತು.

ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ, ಡಾ.ಹೇಮಾವತಿ ವೀ.ಹೆಗ್ಗಡೆ, ಶ್ರದ್ಧಾ ಅಮಿತ್, ಡಿ.ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್, ಡಿ.ಸುರೇಂದ್ರ ಕುಮಾರ್, ಅನಿತಾ ಸುರೇಂದ್ರ ಕುಮಾರ್, ಮೂಡಬಿದ್ರೆ ಆಳ್ವಾಸ್ ಶಿಕ್ಷಣ ಸಂಸ್ಥೆ ಅಧ್ಯಕ್ಷ ಡಾ.ಮೇಹನ್ ಆಳ್ವ, ಉದ್ಯಮಿ ಶಶಿಧರ್ ಶೆಟ್ಟಿ ಬರೋಡಾ, ಉಜಿರೆ ಜನಾರ್ದನ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯ, ಸಂಚಾಲಕರಾದ ಸುಬ್ರಹ್ಮಣ್ಯ ಕುಮಾರ್ ಅಗರ್ತ, ಮೋಹನ್ ಕುಮಾರ್ ಸಹಿತ ಪ್ರಮುಖರು ಭಾಗವಹಿಸಿದರು
- Advertisement -


