- Advertisement -
- Advertisement -
ಚಿಕ್ಕಮಗಳೂರು ಗಿಚ್ಚಗಿಲಿ ಗಿಲಿ ಖ್ಯಾತಿಯ ಚಂದ್ರಪ್ರಭಾ ವಿರುದ್ಧ ಗಂಭೀರ ಆರೋಪವೊಂದು ಕೇಳಿ ಬಂದಿದೆ. ; ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ನಂತರ ಕಾರು ನಿಲ್ಲಿಸಿದ ಪರಾರಿಯಾಗಿ ಅಮಾನವೀಯವಾಗಿ ವರ್ತಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಚಿಕ್ಕಮಗಳೂರು ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಬಳಿ ಮಾಲ್ತೇಶ್ ಎಂಬವರು ಸಂಚರಿಸುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾಮಿಡಿ ಕಿಲಾಡಿ ಚಂದ್ರಪ್ರಭಾ ಸಂಚರಿಸುತ್ತಿದ್ದ ಕಾರು ಢಿಕ್ಕಿ ಹೊಡೆದಿದೆ. ಇದರಿಂದ ರಸ್ತೆಗೆ ಎಸೆಯಲ್ಪಟ್ಟ ಮಾಲ್ತೇಶ್ ತೀವ್ರವಾಗಿ ಗಾಯಗೊಂಡಿದ್ದಾರೆ. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹಾಸನದ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಬೈಕ್ ಸವಾರ ಗಾಯಗೊಂಡರು ಸ್ವಲ್ಪವೂ ಮಾನವೀಯತೆ ಇಲ್ಲ ಎಂಬಂತೆ ಚಂದ್ರಪ್ರಭಾ ಪರಾರಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಚಿಕ್ಕಮಗಳೂರು ನಗರ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -