Sunday, December 3, 2023
Homeತಾಜಾ ಸುದ್ದಿಆಂಧ್ರಪ್ರದೇಶದ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಅರೆಸ್ಟ್

ಆಂಧ್ರಪ್ರದೇಶದ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಅರೆಸ್ಟ್

- Advertisement -
- Advertisement -

ಹೈದರಾಬಾದ್: ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ತೆಲುಗು ದೇಶಂ ಪಕ್ಷದ ಅಧ್ಯಕ್ಷ ಎನ್. ಚಂದ್ರಬಾಬು ನಾಯ್ಡು ಅವರನ್ನು ಬಂಧಿಸಲಾಗಿದೆ.

ಕೌಶಲ್ಯಾಭಿವೃದ್ಧಿ ಹಗರಣದ ಹಗರಣದ ಸಂಬಂಧ ನಂದ್ಯಾಲದಲ್ಲಿ ಆಂಧ್ರ ಪ್ರದೇಶ ಸಿಐಡಿ ಪೊಲೀಸರು ಇಂದು ಬೆಳಗ್ಗೆ 5 ಗಂಟೆಗೆ ಚಂದ್ರಬಾಬು ನಾಯ್ಡು ಅವರನ್ನು ವಶಕ್ಕೆ ಪಡೆದಿದ್ದಾರೆ.

ಸ್ಕಿಲ್ ಡೆವಲಪ್ಮೆಂಟ್ ಹಗರಣದಲ್ಲಿ 371 ಕೋಟಿ ರೂಪಾಯಿ ಅಕ್ರಮ ಎಸಗಿದ ಆರೋಪ ಚಂದ್ರಬಾಬು ನಾಯ್ಡು ಮೇಲಿದ್ದು, ಹೈಕೋರ್ಟ್ ಆದೇಶದ ಮೇರೆಗೆ ಸಿಐಡಿ ಬಂಧಿಸಿದೆ.

ಬೆಳಗ್ಗಿನ ಜಾವ ಪೊಲೀಸರು ಚಂದ್ರಬಾಬು ನಾಯ್ಡು ನಿವಾಸಕ್ಕೆ ಬಂದಾಗ ಹೆಚ್ಚಿನ ಸಂಖ್ಯೆಯಲ್ಲಿ ಟಿಡಿಪಿ ಕಾರ್ಯಕರ್ತರು ಜಮಾಯಿಸಿದ್ದರು.

ಚಂದ್ರಬಾಬು ನಾಯ್ಡು ಮೂರು ಬಾರಿ ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿದ್ದರಲ್ಲದೇ, ವಿಪಕ್ಷ ನಾಯಕರಾಗಿಯೂ ಕಾರ್ಯ ನಿರ್ವಹಿಸಿದ್ಧರು.

- Advertisement -
spot_img

Latest News

error: Content is protected !!