ಬಂಟ್ವಾಳ: ಕಾರಿಂಜ ಮಹತೋಭಾರ ಶ್ರೀ ಕಾರಿಂಜೇಶ್ವರ ದೇವಸ್ಥಾನದ ನೂತನ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ಚಂದ್ರಶೇಖರ ಶೆಟ್ಟಿ ಪುಳಿಮಜಲು ಅವರು ಆಯ್ಕೆಯಾಗಿದ್ದಾರೆ.
ನೂತನ ವ್ಯವಸ್ಥಾಪನಾ ಸಮಿತಿಯ ಪದಗ್ರಹಣ ಮತ್ತು ಸೋಲಾರ್ ದೀಪಗಳ ಉದ್ಘಾಟನಾ ಕಾರ್ಯಕ್ರಮವನ್ನು ಅಕ್ಟೋಬರ್ 10 ರಂದು ಸಂಜೆ 06:30 ಕ್ಕೆ ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮದ ಉದ್ಘಾಟನೆ ಮತ್ತು ಧಾರ್ಮಿಕ ಭಾಷಣವನ್ನು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷರಾಗಿರುವ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ನೆರವೇರಿಸಲಿದ್ದು, ಸಭಾಧ್ಯಕ್ಷರಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಹಾಗೂ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಕರ್ನಾಟಕ ಪರಿಷತ್ ಧಾರ್ಮಿಕ ಸದಸ್ಯ ಸೂರ್ಯನಾರಾಯಣ ಭಟ್ ಕಶೆಕೋಡಿ, ಶ್ರೀ ಕಾರಿಂಜ ಕ್ಷೇತ್ರ ಆಡಳಿತಾಧಿಕಾರಿ ನೋಣಯ್ಯ ನಾಯ್ಕ್,ಕರ್ನಾಟಕ ಬ್ಯಾಂಕ್ ಜನರಲ್ ಮ್ಯಾನೇಜರ್ ವಾದಿರಾಜ್ ಕೆ ಎ, ಕಾವಳಮೂಡೂರು ಗ್ರಾಮ ಪಂಚಾಯತ್ ಅಧ್ಯಕ್ಷರು ಜಯಲಕ್ಷ್ಮಿ, ಕಾವಳಮೂಡೂರು ಗ್ರಾಮ ಪಂಚಾಯತ್ ಉಪಾಧ್ಯಕ್ಷರು ಅಜಿತ್ ಶೆಟ್ಟಿ, ಸೆಲ್ಕೋ ಸೋಲಾರ್ ಡಿಜಿಎಂ ಗುರುಪ್ರಕಾಶ್ ಶೆಟ್ಟಿ ಆಗಮಿಸಲಿದ್ದಾರೆ.
ಇನ್ನು ಸೂರ್ಯಹಾಸ ಕೆ., ಪ್ರವೀಣ ಪೂಜಾರಿ, ಆನಂದ ಶೆಟ್ಟಿ, ರಾಘವೇಂದ್ರ ನಾಯ್ಕ, ರಾಧಾಕೃಷ್ಣ ಕೆ., ಮಾಲತಿ, ಸುಮನಾ ಅವರು ಸಮಿತಿ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.


