Monday, May 13, 2024
Homeತಾಜಾ ಸುದ್ದಿಮಂಗಳೂರು: ನಿರಂತರ ಮಳೆ ಹಿನ್ನೆಲೆ: ಸ್ಟೈಸ್ ಜೆಟ್ ವಿಮಾನಗಳ ಹಾರಾಟದಲ್ಲಿ ವ್ಯತ್ಯಯವಾಗುವ ಸಾಧ್ಯತೆ

ಮಂಗಳೂರು: ನಿರಂತರ ಮಳೆ ಹಿನ್ನೆಲೆ: ಸ್ಟೈಸ್ ಜೆಟ್ ವಿಮಾನಗಳ ಹಾರಾಟದಲ್ಲಿ ವ್ಯತ್ಯಯವಾಗುವ ಸಾಧ್ಯತೆ

spot_img
- Advertisement -
- Advertisement -

ಮಂಗಳೂರು: ದ.ಕ.ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯು ಸುರಿಯುತ್ತಿರುವ ಹಿನ್ನೆಲೆಯಲ್ಲಿ ಕೆಟ್ಟ ಹವಾಮಾನ ಉಂಟಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸ್ಟೈಸ್ ಜೆಟ್ ವಿಮಾನಗಳ ಹಾರಾಟದಲ್ಲಿ ವ್ಯತ್ಯಾಸಗಳಾಗಬಹುದೆಂದು ಸ್ಟೈಸ್ ಜೆಟ್ ಏರ್‌ ಲೈನ್ ತಿಳಿಸಿದೆ.

ಟ್ವೀಟ್ ಮೂಲಕ ಈ ಬಗ್ಗೆ ಮಾಹಿತಿ ನೀಡಿರುವ ಸ್ಟೈಸ್ ಜೆಟ್ ಏರ್ ಲೈನ್, ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಳೆಯ ಹಿನ್ನೆಲೆಯಲ್ಲಿ ಪ್ರತಿಕೂಲ ಹವಾಮಾನ ಉಂಟಾಗುತ್ತಿದೆ. ಪರಿಣಾಮ ಸ್ಟೈಸ್ ಜೆಟ್ ವಿಮಾನಗಳ ಆಗಮನ ಹಾಗೂ ನಿರ್ಗಮನದ ವೇಳಾಪಟ್ಟಿಯಲ್ಲಿ ವ್ಯತ್ಯಾಸವಾಗಬಹುದು. ಆದ್ದರಿಂದ ಪ್ರಯಾಣಿಕರು bit.ly/2tG9xBx ವೆಬ್‌ಸೈಟ್ ಅನ್ನು ಪರಿಶೀಲಿಸುವಂತೆ ಮನವಿ ಮಾಡಿದೆ.

- Advertisement -
spot_img

Latest News

error: Content is protected !!